Advertisement

ಸ್ಪರ್ಧಾ ಜಗತ್ತಿನಲ್ಲಿ ನಿರಂತರ ಅಧ್ಯಯನ ಅಗತ್ಯ

05:25 PM Dec 18, 2021 | Team Udayavani |

ಹುಮನಾಬಾದ: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ನಡೆಸಿದಲ್ಲಿ ಮಾತ್ರ ಇತರರೊಡನೆ ಪೈಪೋಟಿ ನೀಡುವ ಜೊತೆಗೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಪಟ್ಟಣದ ಹಿರೇಮಠ ಸಂಸ್ಥಾನದ ವೀರ ರೇಣುಕ ಗಂಗಾಧರ ಶಿವಾಚಾರ್ಯರು ಹೇಳಿದರು.

Advertisement

ಪಟ್ಟಣದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಶುಕ್ರವಾರ ಇನ್ಪೋಸಿಸ್‌ ಸಹಯೋಗದೊಂದಿಗೆ ಸ್ಥಳೀಯ ಯುವ ಬ್ರಿಗೇಡ್‌ ಸಂಘಟನೆಯು “ಕೈ ಹಿಡಿದು ನಡೆಸೆನ್ನನು’ ಶೀರ್ಷಿಕೆ ಅಡಿಯಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ವರ್ಗದಲ್ಲಿಯೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಸಮಾಜದ ಪ್ರತಿಯೊಬ್ಬರು ಅವರನ್ನು ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕಿದೆ. ಒಳ್ಳೆಯದನ್ನು ಸಾಧಿಸುವ ಛಲ, ಅದಕ್ಕೊಂದು ಗುರಿ ಇಟ್ಟಿಕೊಂಡು ವಿದ್ಯಾರ್ಥಿಗಳು ಗುರುವಿನ ಮಾರ್ಗದರ್ಶನದಲ್ಲಿ ಮುಂದೆ ನಡೆಯಬೇಕು. ಜೀವನದಲ್ಲಿ ನಿರಾಶಾವಾದಿಗಳಾಗದೆ, ಆಶಾವಾದಿಗಳಾಗಿ ನಡೆದರೆ ಅನೇಕ ಅವಕಾಶಗಳು ನಮ್ಮ ಮುಂದೆ ಬರುತ್ತವೆ. ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ದೇಶದ ಎಲ್ಲ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಿದೆ. ಶಿಕ್ಷಕ ವೃಂದದವರು ಮಕ್ಕಳಿಗೆ ಗುಣಮಟ್ಟ ಶಿಕ್ಷಣದ ಜತೆಯಲ್ಲಿ ಮೌಲ್ಯಭರಿತ ಶಿಕ್ಷಣ ನೀಡುವ ಮೂಲಕ ಪರಿಪೂರ್ಣ ಪ್ರಜೆಗಳನ್ನು ತಯಾರು ಮಾಡಬೇಕು ಎಂದು ಸಲಹೆ ನೀಡಿದರು.

ತಹಶೀಲ್ದಾರ್‌ ನಾಗಯ್ನಾ ಹಿರೇಮಠ ಮಾತನಾಡಿ, ಶಿಕ್ಷಣ ಕ್ಷೇತ್ರ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಇನ್ಫೋಸಿಸ್‌ ಫೌಂಡೇಶನ್‌ ಹಾಗೂ ಯುವ ಬ್ರಿಗೇಡ್‌ ಕೈಗೊಂಡಿರುವ ಸಮಾಜಮುಖೀ ಕಾರ್ಯಕ್ರಮ ಶ್ಲಾಘನಿಯವಾಗಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರಕಾರ ಸಾಕಷ್ಟು ಯೋಜನೆ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಸರಕಾರದ ಯೋಜನೆ ಸದುಪಯೋಗ ಪಡೆದು ಉತ್ತಮ ನಾಗರಿಕರಾಗಬೇಕು ಎಂದು ತಿಳಿಸಿದರು.

ಯುವ ಬ್ರಿಗೇಡ್‌ ವಿಭಾಗೀಯ ಸಂಚಾಲಕ ಲಕ್ಷ್ಮೀಕಾಂತ ಹಿಂದೊಡ್ಡಿ ಮಾತನಾಡಿದರು. ಈ ಸಂದರ್ಭದಲ್ಲಿ ಡಾ| ಗೋವಿಂದ, ಕ್ಷೇತ್ರ ಶಿಕ್ಷಣಾ ಧಿಕಾರಿ ಶಿವಗೊಂಡಪ್ಪ ಸಿದ್ದಪ್ಪಗೋಳ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪಂಡರಿನಾಥ ಹುಗ್ಗಿ, ಸರಕಾರಿ ಬಾಲಕರ ಪ್ರೌಢಶಾಲೆ ಮುಖ್ಯಶಿಕ್ಷಕ ಪರಮೇಶ್ವರ ಜಿ, ಯುವ ಬ್ರಿಗೇಡ್‌ ಜಿಲ್ಲಾ ಸಂಚಾಲಕ ಪ್ರಶಾಂತ ಸೇರಿಕಾರ, ಸಂಜಯದತ್ತ ಒಡೆಯರ್‌, ಪರಮೇಶ್ವರ ಸೂರ್ಯವಂಶಿ, ನಾಗೇಶ ಎಸ್‌, ಮನೋಜ ಓಂಕಾರೆ, ಅನಿಲರೆಡ್ಡಿ, ವಸಂತ ಸಜ್ಜನ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next