Advertisement
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾತಂಗ ಪರಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಾತಂಗ ಸಮಾನ ಮನಸ್ಕರ ಪ್ರಗತಿಪರ ವೇದಿಕೆ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮತ್ತು ಸಾಂಸ್ಕೃತಿಕ ಶಿಬಿರ, ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ಸಮಾವೇಶ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಶಿಕ್ಷಣದ ಗುಣಮಟ್ಟ ಕುಸಿತ: ಮಾತಂಗ ಪರಿವಾರ ಕಾರ್ಯಾಧ್ಯಕ್ಷ ಅರಕಲವಾಡಿ ನಾಗೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ತಳವರ್ಗದ ಸಮುದಾಯಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳುವುದು ದುಸ್ತರವಾಗಿದೆ. ವಿದ್ಯಾರ್ಥಿಗಳ ನಿರಂತರ ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕು. ಪೋಷಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತೆ ಮಾಡುವ ಉದ್ದೇಶದಿಂದ ಶೈಕ್ಷಣಿಕ, ಸಾಂಸ್ಕೃತಿಕ ಕುರಿತು ಅರಿವು ಮೂಡಿಸುವ ಸಲುವಾಗಿ ಮಾತಂಗ ಪರಿವಾರದ ವತಿಯಿಂದ 3 ದಿನಗಳ ಕಾಲ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಮಾರಂಭದಲ್ಲಿ ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ಕೆ.ಸುರೇಶ್, ರಾಜ್ಯ ಲೆಕ್ಕಪತ್ರ ಇಲಾಖೆ ಜಂಟಿ ನಿರ್ದೇಶಕ ಡಾ.ಪಿ.ಎಲ್.ವೆಂಕಟೇಶ್ ಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ತಿರುಮಲೇಶ್, ಸಿಟಿಒ ಬಸವರಾಜು, ನಗರಸಭಾ ಸದಸ್ಯ ಮಹದೇವಯ್ಯ, ಮಾತಂಗ ಪರಿವಾರ ರಾಜ್ಯಾಧ್ಯಕ್ಷ ಜಿ.ಜಿ.ಬಸಪ್ಪ, ಉಪಾಧ್ಯಕ್ಷ ಡಾ.ಮುದ್ದಬಸವಯ್ಯ, ಖಜಾಂಚಿ ದೊಡ್ಡರಂಗಯ್ಯ ಇತರರು ಹಾಜರಿದ್ದರು.
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಾಳಜಿ ಇಲ್ಲ. ಅವರಲ್ಲಿ ಮಾನವೀಯತೆ ಕಡಿಮೆಯಾಗುತ್ತಿದೆ. ಇಂತಹ ಸಮಯದಲ್ಲಿ ಏನು ಮಾಡುವುದು ಎಂಬ ಆತಂಕ ಸೃಷ್ಠಿಯಾಗಿದೆ. ಆದರಿಂದ ಪಿಯುಸಿ ವಿದ್ಯಾರ್ಥಿಗಳು ಪದವಿಯ ತನಕ ಎಲ್ಲೂ ದಾರಿ ತಪ್ಪದೇ ಎಚ್ಚರಿಕೆಯಿಂದ ಓದುವ ಪ್ರವೃತ್ತಿ ಬೆಳಸಿಕೊಳ್ಳಬೇಕು.-ಮಲ್ಲಿಕಾರ್ಜುನ ಸ್ವಾಮಿ, ಮೈಸೂರು ರಂಗಯಣ ಜಂಟಿ ನಿರ್ದೇಶಕ