Advertisement

ಬಿಜೆಪಿಯಿಂದ ಸಂವಿಧಾನ ತಿದ್ದುಪಡಿ ಹುನ್ನಾರ

05:27 PM Jul 18, 2022 | Team Udayavani |

ಹಾವೇರಿ: ಕೇಂದ್ರ, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಸಂವಿಧಾನ ತಿದ್ದುಪಡಿ ಮಾಡುವ ಹುನ್ನಾರ ನಡೆಸಿದೆ. ಆದರೆ, ನಮಗೆ ಅಧಿಕಾರ ಇಲ್ಲದಿದ್ದರೂ ಸಂವಿಧಾನ ರಕ್ಷಣೆ ಮಾಡುವ ಹೊಣೆಗಾರಿಕೆ ಕಾಂಗ್ರೆಸ್‌ ಪಕ್ಷದ ಮೇಲಿದೆ ಎಂದು ವಿಪ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಹೇಳಿದರು.

Advertisement

ನಗರದ ಸಿದ್ದರಾಮೇಶ್ವರ ಸಭಾಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ರವಿವಾರ ಆಯೋಜಿಸಿದ್ದ ನವ ಸಂಕಲ್ಪ ಚಿಂತನಾ ಶಿಬಿರದಲ್ಲಿ ಮಾತನಾಡಿದರು.

ಕೇಂದ್ರ, ರಾಜ್ಯದಲ್ಲಿ ಆಡಳಿತ ನಡೆಸಲು ವಿಫಲವಾಗಿರುವ ಬಿಜೆಪಿ, ಸಂವಿಧಾನ ತಿದ್ದುಪಡಿಯಂತಹ ಕೆಲಸಕ್ಕೆ ಕೈ ಹಾಕಿದೆ. ಅದರ ವಿರುದ್ಧ ನಾವು ಹೋರಾಟ ರೂಪಿಸಬೇಕಿದೆ. ರಾಜ್ಯಮಟ್ಟದಲ್ಲಿ ಯಶಸ್ವಿಯಾಗಿ ನಡೆದ ಸಂಕಲ್ಪ ಶಿಬಿರದಂತೆಯೇ ಜಿಲ್ಲಾ ಮಟ್ಟದಲ್ಲಿ ಶಿಬಿರ ಆಯೋಜಿಸಲಾಗಿದೆ. ಈ ಮೂಲಕ ಪಕ್ಷ ಕಟ್ಟುವ ಕೆಲಸ ಮಾಡೋಣ. ಈ ಶಿಬಿರದಲ್ಲಿ ಚುನಾವಣೆಗಳನ್ನು ಎದುರಿಸುವುದು ಹೇಗೆ?, ಚುನಾವಣೆ ಬಳಿಕ ಜಿಲ್ಲೆಯಲ್ಲಿ ಏನೆಲ್ಲ ಕೆಲಸಗಳನ್ನು ಮಾಡಬಹುದು ಎಂಬುದರ ಕುರಿತು ಚರ್ಚಿಸೋಣ ಎಂದರು.

ಪಕ್ಷ ಸಂಘಟಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ 5 ಸಮಿತಿಗಳನ್ನು ರಚಿಸಲಾಗಿದ್ದು, ಆ ಸಮಿತಿಗಳಲ್ಲಿ ಬೇರೆ-ಬೇರೆ ವಿಷಯಗಳ ಚರ್ಚೆ ನಡೆಯಲಿದೆ. ಶಿಬಿರದಲ್ಲಿ ಸರ್ಕಾರದ ವಿರುದ್ಧ ಹೋರಾಟ, ಪಕ್ಷವನ್ನು ಮತ್ತೂಮ್ಮೆ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಬೇಕು. ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುವ ಸಂಕಲ್ಪ ಮಾಡಬೇಕಿದೆ. ಕೆಲ ಶಕ್ತಿಗಳು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು, ಅವುಗಳ ವಿರುದ್ಧ ಹೋರಾಟ ಮಾಡಬೇಕಿದೆ. ಸಮಾಜದಲ್ಲಿ ಶಾಂತಿ, ನೆಮ್ಮದಿ, ಸಹಬಾಳ್ವೆಯಿಂದ ಬದುಕು ನಡೆಸುವಂತಹ ವಾತಾವರಣ ನಿರ್ಮಿಸಬೇಕಿದೆ ಎಂದರು.

ಶಿಬಿರದಲ್ಲಿ ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸದೇ ಪಕ್ಷದ ಕುರಿತು ಚರ್ಚಿಸೋಣ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ಸಾಧಿ ಸುವ ನಿಟ್ಟಿನಲ್ಲಿ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಆರಂಭಿಸಬೇಕು. ಬಿಜೆಪಿ ಸರ್ಕಾರ ಜಿಪಂ, ತಾಪಂ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸದೇ ಪಲಾಯನ ಮಾಡುತ್ತಿದೆ ಎಂದು ಟೀಕಿಸಿದರು.

Advertisement

ಜಿಲ್ಲಾ ಕಾಂಗ್ರೆಸ್‌ ಜಿಲ್ಲಾ ಉಸ್ತುವಾರಿ ಶಿವರಾಮೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಮೂಲಕ ಮುಂಬರುವ ವಿಧಾನಸಭೆ, ಜಿಪಂ, ತಾಪಂ ಚುನಾವಣೆಯಲ್ಲಿ ಗೆಲ್ಲುವ ಸಂಕಲ್ಪ ಮಾಡಬೇಕಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಕಿತ್ತೂಗೆದು ಕಾಂಗ್ರೆಸ್‌ ಪಕ್ಷವನ್ನು ಅಧಿ ಕಾರಕ್ಕೆ ತರುವ ಸಂಕಲ್ಪ ಮಾಡಬೇಕಿದೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಹಾಗೂ ಸ್ವಾತಂತ್ರ್ಯ ಸಿಕ್ಕ ಬಳಿಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದಿರುವ ಕಾಂಗ್ರೆಸ್‌ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕೆಂದರು.

ಪಂಚಾಯತ್‌ ರಾಜ್‌ ವ್ಯವಸ್ಥೆ ಜಾರಿಗೊಳಿಸಿದ್ದು ಕಾಂಗ್ರೆಸ್‌ ಪಕ್ಷ. ಆದರೆ, ಬಿಜೆಪಿ ಜಾರಿಗೊಳಿಸಿರುವ ಯಾವ ಯೋಜನೆಗಳೂ ಜನರಿಗೆ ತಲುಪುತ್ತಿಲ್ಲ.ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವಾಡುತ್ತಿದೆ. ಸಂಸದರ ಗ್ರಾಮ ವಿಕಾಸ ಯೋಜನೆ, ಅಮೃತ ಸಿಟಿ ಯೋಜನೆಗಳು ಕಣ್ಮರೆಯಾಗಿವೆ ಎಂದು ದೂರಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ ಮಾನೆ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಮನೋಹರ ತಹಶೀಲ್ದಾರ್‌, ಮಾಜಿ ಸಂಸದ ಐ.ಜಿ. ಸನದಿ, ಮಾಜಿ ಶಾಸಕರಾದ ಬಿ.ಎಚ್‌. ಬನ್ನಿಕೋಡ, ಅಜ್ಜಂμàರ್‌ ಖಾದ್ರಿ, ಡಿ.ಆರ್‌. ಪಾಟೀಲ, ಸೋಮಣ್ಣ ಬೇವಿನಮರದ, ಪ್ರಮುಖರಾದ ಎಸ್‌.ಆರ್‌. ಪಾಟೀಲ, ಕೊಟ್ರೇಶಪ್ಪ ಬಸೇಗಣ್ಣಿ, ಸಂಜೀವಕುಮಾರ ನೀರಲಗಿ, ಪ್ರಕಾಶಗೌಡ ಪಾಟೀಲ, ಪ್ರಕಾಶ ಕೋಳಿವಾಡ, ಆರ್‌.ಎಂ. ಕುಬೇರಪ್ಪ, ಶ್ರೀನಿವಾಸ ಹಳ್ಳಳಿ ಇತರರು ಇದ್ದರು.

ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸದೇ ಪಕ್ಷದ ಕುರಿತು ಚರ್ಚಿಸೋಣ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಆರಂಭಿಸಬೇಕು. –ಸಲೀಂ ಅಹ್ಮದ್‌, ಕೆಪಿಸಿಸಿ ಕಾರ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next