Advertisement
ರವಿವಾರ ಬೆಂಗಳೂರಿನ ಅರಮನೆ ಮೈದಾನ ದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಹೆಣ್ಣು ಮತ್ತು ಗಂಡಿಗೆ ಮತದಾನದ ಸಮಾನ ಹಕ್ಕು ಕೊಟ್ಟಿರುವುದು ನಮ್ಮ ಸಂವಿಧಾನ ಮಾತ್ರ ಎಂದು ಖರ್ಗೆ ಹೇಳಿದ್ದಾರೆ. ಸಂವಿಧಾನ ಉಳಿದರೆ ದೇಶದಲ್ಲಿ ಏಕತೆ ಇರುತ್ತದೆ. ಪ್ರಜಾಪ್ರಭುತ್ವ ಉಳಿದರೆ ಶಾಂತಿ, ನೆಮ್ಮದಿಯಿಂದ ಬಾಳಲು ಸಾಧ್ಯ. ನಾವೆಲ್ಲರೂ ಸಂವಿಧಾನದ ಆಶಯಕ್ಕೆ ತಕ್ಕಂತೆ ಬದುಕಬೇಕು ಎಂದರು.
Related Articles
ಬೆಂಗಳೂರು: ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೂಗೆಯ ದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರವಿವಾರ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
Advertisement
ಈ ಹಿಂದೆ ಪ್ರಧಾನಿ ಮೋದಿ ಸಚಿವ ಸಂಪುಟ ದಲ್ಲಿ ಇದ್ದ ಅನಂತಕುಮಾರ ಹೆಗಡೆ ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಘೋಷಿಸಿದ್ದರು. ಅದನ್ನು ಪ್ರಧಾನಿ ಮೋದಿಯವರಾಗಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿಯಾಗಲಿ, ಆರೆಸ್ಸೆಸ್ ಆಗಲಿ ಖಂಡಿಸಲಿಲ್ಲ. ವಿರೋಧಿಸಲೂ ಇಲ್ಲ ಎಂದು ವಾಗ್ಧಾಳಿ ನಡೆಸಿದರು.
ಬಿಜೆಪಿ ಮತ್ತು ಆರೆಸ್ಸೆಸ್ ಅಜೆಂಡಾವನ್ನು ಸಂಸದ ಅನಂತಕುಮಾರ ಹೆಗಡೆ ಬಾಯಿಯಲ್ಲಿ ಹೇಳಿಸಿದರು. ಈ ಬಗ್ಗೆ ಇಡೀ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು. ಇಲ್ಲದೆ ಹೋದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದರು.ಬುದ್ದ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣ ಗುರು, ವಿವೇಕಾನಂದ ಮುಂತಾ ದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನ ಎಂದು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ವಿಶ್ವದ ಸಂವಿಧಾನಗಳನ್ನೆಲ್ಲ ಅಧ್ಯಯನ ಮಾಡಿ ಎಲ್ಲದರ ಅತ್ಯುತ್ತಮ ಸಾರವನ್ನು ತೆಗೆದು ಡಾ| ಅಂಬೇಡ್ಕರ್ ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ ಎಂದರು.
ಐಎನ್‌ಡಿಐಎ ಒಕ್ಕೂಟದ ಮುಖಂಡರಾದ ಫಾರೂಕ್ ಅಬ್ದುಲ್ಲಾ, ಸೀತಾರಾಮ್ ಯೆಚೂರಿ ಸೇರಿ 18 ರಾಜ್ಯಗಳ 40 ಮಂದಿ ಮುಖಂಡರು, 12 ಪಕ್ಷಗಳ ನಾಯಕರು ಭಾಗವಹಿಸಿದ್ದರು.