Advertisement
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ವಿವಿಧ ಸಂಘಟನೆಗಳು, ಸರ್ಕಾರೇತರ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಸಂವಿಧಾನ ಜಾಗೃತಿ ಜಾಥಾ ಪೂರ್ವ ಭಾವಿ ಸಿದ್ಧತೆಗಳ ಸಲಹೆ ಆಲಿಸಿ ನಂತರ ಮಾತನಾಡಿದರು.
Related Articles
Advertisement
ಜಿಲ್ಲೆಗೆ ಮೊದಲ ಸ್ಥಾನ ಸಿಗಬೇಕು: ಈ ಕಾರ್ಯಕ್ರಮದ ಮೌಲ್ಯಮಾಪನವನ್ನು ಭವ್ಯತೆ, ನಾವೀನ್ಯತೆ, ಭಾಗವಹಿಸುವಿಕೆ, ಪರಿಣಾಮಕಾರಿತ್ವ ಮತ್ತು ಮಾಧ್ಯಮ, ನಾಗರಿಕ ಸಮಾಜದ ಪ್ರತಿಕ್ರಿಯೆಗಳ ಅಂಶಗಳ ಮೇಲೆ ರಾಜ್ಯ ಮಟ್ಟದಲ್ಲಿ ಪರಿಶೀಲನೆ ನಡೆಸಿ, ಮೊದಲ ಮೂರು ಜಿಲ್ಲೆಗಳಿಗೆ ಫೆಬ್ರವರಿ 25ರ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದರಿಂದ ಮೊದಲ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಭಾಜನವಾಗುವ ನಿಟ್ಟಿನಲ್ಲಿ ತಮ್ಮ ಸಹಭಾಗಿತ್ವ ಹಾಗೂ ಸಹಕಾರ ಅಗತ್ಯವಾಗಿರುತ್ತದೆ. ಆದ್ದರಿಂದ ಎಲ್ಲಾ ಸಂಘಟಣೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸ ಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎನ್.ನಾಗೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ಎನ್. ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಸಹಾಯಕ ನಿರ್ದೇಶಕ ಶೇಷಾದ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಹೆಚ್ಚು ಗ್ರಾಮಗಳಿಗೆ ಜಾಥಾ: ಮೆರವಣಿಗೆಯು ಸಾಧ್ಯವಾದಷ್ಟು ಹೆಚ್ಚು ಗ್ರಾಮಗಳ ಮೂಲಕ ಹಾದು ಹೋಗಲಿದ್ದು, ತಾಲೂಕಿನ ಗಡಿಯಲ್ಲಿ ಅದನ್ನು ಸಂಬಂಧಪಟ್ಟ ಕ್ಷೇತ್ರದ ಶಾಸಕರು ಮತ್ತಿತರ ಚುನಾಯಿತ ಪ್ರತಿನಿಧಿಗಳು ಸ್ವಾಗತಿಸಲಿದ್ದಾರೆ. ಸಮಾವೇಶ ಜರುಗುವ ಸ್ಥಳಗಳಲ್ಲಿ ಸಂವಿಧಾನ ಮತ್ತು ಸಂಬಂಧಿತ ಇತರ ವಿಷಯಗಳ ಕುರಿತಂತೆ ಚರ್ಚಾ, ಚಿತ್ರಕಲೆ, ಪ್ರಬಂಧ ಸ್ಪರ್ಧೆಗಳು ಆಯೋಜಿಸಲಾಗುವುದು ಡೀಸಿ ಪಿ.ಎನ್. ರವೀಂದ್ರ ತಿಳಿಸಿದರು.
ಭಾರತದ ಸಂವಿಧಾನದ ಪಿಠಿಕೆ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಡಾ.ಬಿ.ಆರ್. ಅಂಬೇಡ್ಕರ್ ರವರ ಪರಿಕಲ್ಪನೆಗಳು, ಬಸವಣ್ಣನವರ ವಚನಗಳು, ಮತ್ತು ಭಾರತದ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆಯನ್ನು ಜಾಥಾವು ಬಿಂಬಿಸಲಿದೆ. -ಪಿ.ಎನ್.ರವೀಂದ್ರ, ಜಿಲ್ಲಾಧಿಕಾರಿ