Advertisement

Constitution ರಕ್ಷಿಸುವವರಿಂದಲೇ ಸಂವಿಧಾನದ ಕಗ್ಗೊಲೆ: ಪ್ರಿಯಾಂಕ್‌ ಖರ್ಗೆ

12:52 AM Aug 19, 2024 | Vishnudas Patil |

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಪ್ರಬಲ ಸಾಕ್ಷ್ಯಾಧಾರಗಳಿಲ್ಲದಿದ್ದರೂ ರಾಜಕೀಯ ದುರುದ್ದೇಶದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಈ ಮೂಲಕ ಸಂವಿಧಾನ ರಕ್ಷಣೆ ಮಾಡುವವರಿಂದಲೇ ಸಂವಿಧಾನದ ಕಗ್ಗೊಲೆ ಮಾಡಿದಂತಾಗಿದೆ. ಆದರೆ, ಇದಕ್ಕೆ ಕಾಂಗ್ರೆಸ್‌ ಹೆದರುವುದಿಲ್ಲ. ಹೋರಾಟ ಮುಂದುವರಿಸಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

Advertisement

ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಕಳೆದ 1 ವರ್ಷದಿಂದ ಒಂದಿಲ್ಲೊಂದು ರೀತಿಯಲ್ಲಿ ನಡೆದೇ ಇದೆ ಎಂದು ರವಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. “ನಮ್ಮ ತೆರಿಗೆ ನಮ್ಮ ಹಕ್ಕು’ ಸೇರಿದಂತೆ ರಾಜ್ಯ ಸರಕಾರ ನಡೆಸಿದ ವಿವಿಧ ಹೋರಾಟಗಳಿಂದ ಕೇಂದ್ರಕ್ಕೆ ಮುಜುಗರ ಉಂಟಾಗುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್‌ ಶಾ ವಿಚಲಿತರಾಗಿ, ಸರಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಕೈಗೊಂಬೆಯಾಗಿ ರಾಜ್ಯಪಾಲರು ವರ್ತಿಸುತ್ತಿದ್ದಾರೆ ಎಂದು ದೂರಿದರು.

ಸಿಎಂ ಹೆಗಲಿಗೆ ಹೆಗಲು ಕೊಡ್ತೀವಿ
ಕಿಯೋನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ ಮಾತನಾಡಿ, ಎಲ್ಲರೂ ಮುಖ್ಯಮಂತ್ರಿಗಳ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ. ಕಾನೂನು ಹೋರಾಟವನ್ನು ಮಾಡುತ್ತೇವೆ. ರಾಜ್ಯ ಜನತೆ ನಮ್ಮ ಜತೆ ನಿಲ್ಲಬೇಕು ಎಂದು ಮನವಿ ಮಾಡುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next