Advertisement
ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಕಳೆದ 1 ವರ್ಷದಿಂದ ಒಂದಿಲ್ಲೊಂದು ರೀತಿಯಲ್ಲಿ ನಡೆದೇ ಇದೆ ಎಂದು ರವಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. “ನಮ್ಮ ತೆರಿಗೆ ನಮ್ಮ ಹಕ್ಕು’ ಸೇರಿದಂತೆ ರಾಜ್ಯ ಸರಕಾರ ನಡೆಸಿದ ವಿವಿಧ ಹೋರಾಟಗಳಿಂದ ಕೇಂದ್ರಕ್ಕೆ ಮುಜುಗರ ಉಂಟಾಗುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ವಿಚಲಿತರಾಗಿ, ಸರಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಕೈಗೊಂಬೆಯಾಗಿ ರಾಜ್ಯಪಾಲರು ವರ್ತಿಸುತ್ತಿದ್ದಾರೆ ಎಂದು ದೂರಿದರು.
ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮಾತನಾಡಿ, ಎಲ್ಲರೂ ಮುಖ್ಯಮಂತ್ರಿಗಳ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ. ಕಾನೂನು ಹೋರಾಟವನ್ನು ಮಾಡುತ್ತೇವೆ. ರಾಜ್ಯ ಜನತೆ ನಮ್ಮ ಜತೆ ನಿಲ್ಲಬೇಕು ಎಂದು ಮನವಿ ಮಾಡುವುದಾಗಿ ಹೇಳಿದರು.