Advertisement
ಜಿಲ್ಲಾ ಗ್ಯಾರಂಟಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು, ಹಿಂದುಳಿದವರು, ದಲಿತರು, ರೈತರು, ಕಾರ್ಮಿಕರು, ಮಹಿಳೆಯರು ಸಂವಿಧಾನ ಬದಲಾ ವಣೆಯಾದರೆ ಬದುಕಲು ಸಾಧ್ಯವಿಲ್ಲ. ಮನುಸ್ಮತಿ, ಅಸಮಾನತೆಗೆ ಮರಳಿ ಹೋಗಲು ಸಾಧ್ಯವಿಲ್ಲ ಎಂದರು.
ಮೀನುಗಾರಿಕೆ ಇಲಾಖೆಗೆ 3 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಇಡಲಾಗಿದೆ. ಮೀನುಗಾರರಿಗೆ 10 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದರು. ಬಿಜೆಪಿ ಜನರ ಭಾವನೆ ಜತೆ ಆಟವಾಡಿದರೆ ಕಾಂಗ್ರೆಸ್ ಜನರ ಬದುಕು ಕಟ್ಟುವ ಕೆಲಸ ಮಾಡು ತ್ತಿದೆ. ರಾಜ್ಯ ಸರಕಾರ ಗ್ಯಾರಂಟಿ ಯೋಜ ನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಗ್ಯಾರಂಟಿ ಯೋಜನೆಗಳು ರದ್ದಾಗು ವುದಿಲ್ಲ. ವಿಪಕ್ಷಗಳು ಅನಾವಶ್ಯಕ ಟೀಕೆ ಮಾಡುತ್ತಿವೆ. ಅವುಗಳ ಸುಳ್ಳು ಪ್ರಚಾರಕ್ಕೆ ತಮ್ಮ ಮತಗಳ ಮೂಲಕ ತಡೆ ಹಾಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದರು.
Related Articles
Advertisement
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಶೆಟ್ಟಿನಿರೂಪಿಸಿದರು.
ಸಿಎಂ ಜತೆಗೆ ಬಂದ ಹೆಗ್ಡೆಮಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಬಂದು ಆದಿಉಡುಪಿ ಹೆಲಿಪ್ಯಾಡ್‌ನಲ್ಲಿ ಇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್‌ನಿಂದ ಸ್ವಾಗತಿಸಲಾಯಿತು. ವಿಶೇಷವೆಂದರೆ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಜಯಪ್ರಕಾಶ್ ಹೆಗ್ಡೆ ಕೂಡ ಸಿಎಂ ಅವರೊಂದಿಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಸಚಿವರು ಜತೆಗಿದ್ದರು. ಮಧ್ಯಾಹ್ನದ ಊಟಕ್ಕೆ ಮುಖ್ಯಮಂತ್ರಿ ನೀರ್‌ದೋಸೆ, ನಾಟಿಕೋಳಿ ಸಾರು ಹಾಗೂ ಮುದ್ದೆ ಸವಿದರು. ಜಿಲ್ಲೆಯ ಎಲ್ಲ ಗ್ರಾ.ಪಂ., ನಗರಸ್ಥಳೀಯ ಸಂಸ್ಥೆಗಳಿಂದ ಜಿಲ್ಲಾಡಳಿತವೇ ಉಚಿತ ಬಸ್ ವ್ಯವಸ್ಥೆ ಮಾಡಿ ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆತಂದಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದರು. ಫಲಾನುಭವಿಗಳಿಗೆ ಊಟ, ಉಪಾಹಾರದ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿತ್ತು.