Advertisement
ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ 75ನೇ ವರ್ಷದ ಸಂವಿಧಾನ ಅಂಗೀಕರಣ ದಿನೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ನಾನು 2ನೇ ಸಲ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲು ಕೆಲವರಿಗೆ ಆಗುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದೇ ಈ ಸಂವಿಧಾನ ಬಲದಿಂದ ಎಂದರು.
Related Articles
ಮೋದಿ ಮಂತ್ರಿಮಂಡಲದಲ್ಲಿ ಮಂತ್ರಿ ಆಗಿದ್ದ ಅನಂತ ಕುಮಾರ ಹೆಗಡೆ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಸಾರ್ವಜನಿಕವಾಗಿ ಹೇಳಿದ್ದರು. ಆದರೆ ಮೋದಿಯವರಾಗಲಿ, ಬಿಜೆಪಿಯವರಾಗಲಿ ಇದನ್ನು ವಿರೋಧಿಸ ಲಿಲ್ಲ. ಅವರನ್ನು ಮಂತ್ರಿ ಸ್ಥಾನದಿಂದ ಇಳಿಸ ಲಿಲ್ಲ. ಆದ್ದರಿಂದ ಅನಂತ ಕುಮಾರ ಹೆಗಡೆ ಅವರ ಮಾತಿಗೆ ಅವರೆಲ್ಲರ ಸಮ್ಮತಿ ಇತ್ತು ಅಂತಲೇ ಅರ್ಥ. ಇದನ್ನು ದೇಶದ ಜನತೆ ಸರಿ ಯಾಗಿ ಅರ್ಥಮಾಡಿಕೊಳ್ಳಬೇಕು ಎಂದರು. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಎಚ್.ಸಿ. ಮಹದೇವಪ್ಪ ಮಾತನಾಡಿದರು.
Advertisement
ಮಹದೇವಪ್ಪಗೆ ರಜೆ ನೀಡಿ ಉಪನ್ಯಾಸಕ್ಕೆ ಕಳುಹಿಸಬೇಕುಸಚಿವ ಎಚ್.ಸಿ. ಮಹದೇವಪ್ಪ ಸಮಾಜ ಕಲ್ಯಾಣ ಇಲಾಖೆಗೆ ಹೊಸ ರೂಪ ನೀಡಿದ್ದಾರೆ. ಅವರಿಗೆ ರಜೆ ನೀಡಿ ನಮ್ಮ ವಿಶ್ವವಿದ್ಯಾನಿಲಯಗಳಿಗೆ ಸಂದರ್ಶಕ ಉಪನ್ಯಾಸಕರನ್ನಾಗಿ ಕಳುಹಿಸಬೇಕು ಎನ್ನುವ ಅಭಿಲಾಷೆ ಅವರ ಮಾತುಗಳನ್ನು ಕೇಳಿದಾಗ ಅನ್ನಿಸಿತು. ಚಿಕ್ಕ ಮಕ್ಕಳಿಗೂ ಅರ್ಥವಾಗುವ ರೀತಿ ಅವರು ಸಂವಿಧಾನದ ಬಗ್ಗೆ ತಿಳಿಸಿಕೊಟ್ಟಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.