Advertisement

Constitution debate: ಡಿ.14ಕ್ಕೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ

01:32 AM Dec 10, 2024 | Team Udayavani |

ಹೊಸದಿಲ್ಲಿ: ದೇಶದಲ್ಲಿ ಸಂವಿಧಾನ ಸ್ವೀಕರಿಸಿ 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸತ್‌ನಲ್ಲಿ ವಿಶೇಷ ಚರ್ಚೆ ಡಿ.13ರಿಂದ ಶುರುವಾಗಲಿದೆ. ಈ ಬಗ್ಗೆ ಲೋಕಸಭೆಯಲ್ಲಿ ಡಿ.13, 14ರಂದು ಚರ್ಚೆ ನಡೆ­ಯ­ಲಿದ್ದು, ಮೋದಿ ಶನಿ­ವಾರ ಉತ್ತರ ನೀಡಲಿದ್ದಾರೆ. ರಾಜ್ಯಸಭೆಯಲ್ಲಿ ಡಿ.16, 17 ರಂದು ಚರ್ಚೆ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚರ್ಚೆಯನ್ನು ಆರಂಭಿಸಲಿದ್ದಾರೆ ಎಂದು ಮೂಲ­ಗಳು ತಿಳಿಸಿವೆ. ಸಂಸತ್‌ನ ಚಳಿಗಾಲದ ಅಧಿವೇಶನ ಡಿ.20 ಮುಕ್ತಾಯವಾಗಲಿದೆ. ಸಂವಿಧಾನ ಸ್ವೀಕರಿಸಿ 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಚರ್ಚೆ ನಡೆಯಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು.

Advertisement
Advertisement

Udayavani is now on Telegram. Click here to join our channel and stay updated with the latest news.

Next