ಬೇಲೂರು: ಸಮಾನತೆಯ ಸಂವಿಧಾನ ರಚಿಸುವ ಮೂಲಕ ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ, ತಾಲೂಕು ಬಗರ್‌ಹುಕುಂ ಸಾಗುವಳಿ ಸಕ್ರಮ ಸಮಿತಿ ಸದಸ್ಯ ದೇವಿಹಳ್ಳಿ ಮಲ್ಲಿಕಾರ್ಜುನ ಹೇಳಿದರು.
72ನೇ ವರ್ಷದ ಗಣರಾಜ್ಯೋತ್ಸವದ ಅಂಗವಾಗಿ ತಾಲೂಕು ಬಿಜೆಪಿ ಎಸ್‌ಸಿ, ಎಸ್‌ಟಿ ಮೋರ್ಚಾದಿಂದ ಪಟ್ಟಣದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾತನಾಡಿದ ಅವರು, ಡಾ.ಅಂಬೇಡ್ಕರ್ ದೇಶದ ಬಡವರಿಗೆ, ನಿರ್ಗತಿಕರಿಗೆ, ಶೋಷಿತರಿಗೆ ಸಾಮಾಜಿಕ, ಆರ್ಥಿಕ ನ್ಯಾಯದೊಂದಿಗೆ ಮೂಲ ಸೌಲಭ್ಯ ಒದಗಿಸುವ ಉದ್ದೇಶದಿಂದ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ರಚಿಸಿ ವಿಶ್ವ ರತ್ನ ಆಗಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಶಿಸ್ತು-ಸಂಯಮ ಮುಖ್ಯ: ಶಿಮುಶ
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಡಾ.ಚೇತನ್‌ಕುಮಾರ್ ಮಾತನಾಡಿ, ಡಾ.ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಇತರೆ ರಾಷ್ಟ್ರಗಳು ಒಪ್ಪಿ, ಅದರಲ್ಲಿನ ಅಂಶಗಳನ್ನುತಮ್ಮ ಸಂವಿಧಾನದಲ್ಲೂ ಅಳವಡಿಸ ಕೊಳ್ಳುತ್ತಿರು ವುದು ಹೆಮ್ಮೆಯ ವಿಷಯ. ಪ್ರತಿಯೊಬ್ಬ ಭಾರತೀಯನೂ ಸಂವಿಧಾನ ದಡಿಯಲ್ಲಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡಿಕೊಂಡು ಸಮಾನತೆಯಿಂದ ಬದುಕಬೇಕಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸ್, ಜಿಲ್ಲಾ ಕಾರ್ಯದರ್ಶಿ ರಮೇಶ್, ಮುಖಂಡರಾದ ಬಸವರಾಜ್, ಸೋಮಶೇಖರ್, ಸುನೀಲ್, ಪ್ರಕಾಶ್ ಇನ್ನಿತರರಿದ್ದರು.