Advertisement

ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿ: ಸರ್ಕಾರದ ವಜಾಗೆ ಆಗ್ರಹ

08:38 AM Mar 30, 2019 | Team Udayavani |

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವಿರೋಧಿಸಿ ಮುಖ್ಯಮಂತ್ರಿಯಾದಿಯಾಗಿ ಸಂಪುಟದ ಹಲವು ಸಚಿವರು ಬೀದಿಗಿಳಿದು ಹೋರಾಟ ನಡೆಸಿರುವುದು ದೇಶದ ಒಕ್ಕೂಟ
ವ್ಯವಸ್ಥೆಗೆ ವಿರುದಟಛಿವಾಗಿದೆ. ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದ್ದು, ಸರ್ಕಾರವನ್ನು ಕೂಡಲೇ ವಜಾಗೊಳಿಸುವಂತೆ ಕೋರಿ ರಾಜ್ಯಪಾಲರು ಕೇಂದ್ರ ಗೃಹ
ಸಚಿವರಿಗೆ ಪತ್ರ ಬರೆಯಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಗೋ.ಮಧುಸೂದನ್‌ ಆಗ್ರಹಿಸಿದರು.

Advertisement

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಸಚಿವರು ಕಳ್ಳ
ಹಣ ಇಟ್ಟುಕೊಂಡಿದ್ದ ಗುತ್ತಿಗೆದಾರರ ಪರವಾಗಿ ಐಟಿ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ್ದು ಖಂಡನೀಯ. ಇದು ರಾಜ್ಯದ ಜನ ತಲೆತಗ್ಗಿಸಬೇಕಾದ ಬೆಳವಣಿಗೆಯಾಗಿದ್ದು, ಇದಕ್ಕಿಂತ ಅವಮಾನ ಬೇಕಿಲ್ಲ ಎಂದು ತಿಳಿಸಿದರು.

ಚುನಾವಣಾ ಆಯೋಗದ ಸೂಚನೆಯಂತೆ ಐಟಿ ಇಲಾಖೆಯು ದೊಡ್ಡ ಮೊತ್ತದ ಹಣ ಡ್ರಾ ಮಾಡಿದ ಆಧಾರದ ಮೇಲೆ ದಾಳಿ ನಡೆಸಿದೆ. ಅವರ ಬಳಿ ಇದ್ದುದು ಖಾಸಗಿಯವರ
ಹಣವಲ್ಲ. ರಾಜ್ಯದ ಜನ ತೆರಿಗೆ ರೂಪದಲ್ಲಿ ನೀಡಿರುವ ಹಣ. ಐಟಿ ಇಲಾಖೆ ಹಿರಿಯ ಅಧಿಕಾರಿಗಳನ್ನು ಬಿಜೆಪಿ ಏಜೆಂಟ್‌ ಎಂದು ಕರೆದಿರುವುದು ಖಂಡನೀಯ. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂ ಸುವುದರ ಜತೆಗೆ ಕರ್ತವ್ಯನಿರತ ಐಟಿ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಗೂ ಒತ್ತಡ ಹೇರುವ ಪ್ರಯತ್ನದ ವಿರುದ್ಧ ಆಯೋಗ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು ಎಂದು ಹೇಳಿದರು.

ಮುಖ್ಯಮಂತ್ರಿಗಳು ಅಪರಾಧಿ: ಗೌಪ್ಯತೆ ಕಾಪಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಗಳು ಕಪ್ಪು ಇಲಿಗಳೆಲ್ಲಾ ಬಿಲ ಸೇರಿಕೊಳ್ಳಲಿ ಎಂಬ ಉದ್ದೇಶದಿಂದ ಐಟಿ ದಾಳಿ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆ
ವಿಚಾರದಲ್ಲಿ ಮುಖ್ಯಮಂತ್ರಿಗಳು ಅಪರಾಧಿಯಾಗಿದ್ದು, ಆ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಟನೆಯಲ್ಲಿ
ಪಾಲ್ಗೊಂಡು ಭಾಷಣ ಮಾಡಲು ನಾಚಿಕೆಯಾಗಬೇಕು. ಅವರೂ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಕಳ್ಳರನ್ನು ಹಿಡಿಯಲು ಹೋದ ಐಟಿಯವರ ವಿರುದ್ಧ ಪ್ರತಿಭಟನೆ ನಡೆಸುವ ಮಾನಗೆಟ್ಟ ಸರ್ಕಾರವಿದು ಎಂದು ವಾಗ್ಧಾಳಿ ನಡೆಸಿದರು.

ರಾಜ್ಯ ಬಿಜೆಪಿ ಸಹ ವಕ್ತಾರರಾದ ಅನ್ವರ್‌ ಮಾಣಿಪ್ಪಾಡಿ, ಎಸ್‌.ಪ್ರಕಾಶ್‌, ಎ.ಎಚ್‌.ಆನಂದ್‌, ಚಲವಾದಿ ನಾರಾಯಣ ಸ್ವಾಮಿ, ಮಾಳವಿಕಾ ಅವಿನಾಶ್‌ ಉಪಸ್ಥಿತರಿದ್ದರು.

Advertisement

ಬಿಜೆಪಿಗೆ ಸಂಬಂಧವಿಲ್ಲ… ಮಂಡ್ಯ ಕ್ಷೇತ್ರದಲ್ಲಿ ಹಣದ ಹೊಳೆ ಹರಿಯುತ್ತಿದೆ
ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು ನಿಜ.
ಆಯೋಗ ರಾಜ್ಯ ಮಾತ್ರವಲ್ಲ, ದೇಶದೆಲ್ಲೆಡೆ ತೀವ್ರ ನಿಗಾ ವಹಿಸಿದೆ. ಆಯೋಗವು ಪಾರದರ್ಶಕ ವಾಗಿ ಕಾರ್ಯ ನಿರ್ವಹಿಸು ತ್ತಿದೆ. ಆಯೋಗದ ಸೂಚನೆಯಂತೆ ಐಟಿ ಇಲಾಖೆ ದಾಳಿ ನಡೆಸಿದೆ. ಇದಕ್ಕೂ, ಬಿಜೆಪಿಗೂ ಸಂಬಂಧವಿಲ್ಲ ಎಂದು ಗೋ.
ಮಧುಸೂದನ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next