Advertisement

ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಮಾನ್ಯತೆ ನೀಡಿ

11:52 AM Mar 13, 2018 | |

ಅಫಜಲಪುರ: ಲಿಂಗಾಯತ ಧರ್ಮ ತನ್ನದೇ ಆದ ವಿಶಿಷ್ಟತೆ ಹೊಂದಿದ ಧರ್ಮವಾಗಿದೆ. ವಿಶ್ವಗುರು ಬಸವಣ್ಣನವರು ಈ ಧರ್ಮದ ಸ್ಥಾಪಕರಾಗಿದ್ದಾರೆ. ಇದು ಹಿಂದೂ ಧರ್ಮದ ಭಾಗವಾಗಿಲ್ಲ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು
ಸಿಗುತ್ತವೆ. ಹೀಗಾಗಿ ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಮಾನ್ಯತೆ ಸಿಗಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯರು ತಹಶೀಲ್ದಾರ್‌ ಇಸ್ಮಾಯಿಲ್‌ ಮುಲ್ಕಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

Advertisement

ಜಾಗತಿಕ ಲಿಂಗಾಯತ ಮಹಾಸಭಾದ ಬಸವರಾಜ ಚಾಂದಕವಟೆ, ಶಂಕ್ರೆಪ್ಪ ಮಣೂರ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆ, ಮೇಲು-ಕೀಳು ಭಾವನೆಗಳು, ತಾರತಮ್ಯ ಮುಂತಾದ ಕೆಟ್ಟ ಆಚರಣೆಗಳನ್ನು ಹೊಂದಿದ ಹಿಂದೂ ಧರ್ಮದ ವಿರುದ್ಧ ನಿಂತು ಸಮ ಸಮಾಜ ನಿರ್ಮಾಣಕ್ಕಾಗಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ್ದಾರೆ. ಅನುಭವ ಮಂಟಪ ಸ್ಥಾಪಿಸಿ ಎಲ್ಲ ಜಾತಿ, ಜನಾಂಗದವರಿಗೆ ಸಮಾನತೆ ಕಲ್ಪಿಸಿದ್ದಾರೆ. ಬಸವಾದಿ ಶರಣರ ಸಮಾನತೆ ತತ್ವಗಳು ಭಾರತೀಯ ಸಂವಿಧಾನದಲ್ಲೂ ಅಡಕವಾಗಿವೆ. 

ಹೀಗಿರುವಾಗ ಬಸವ ಧರ್ಮವಾದ ಲಿಂಗಾಯತ ಧರ್ಮಕ್ಕೆ ಏಕೆ ಸಂವಿಧಾನಿಕ ಮಾನ್ಯತೆ ಸಿಗಬಾರದು ಎಂದು ಪ್ರಶ್ನಿಸಿದ ಅವರು, ಆದಷ್ಟು ಬೇಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತ್ಯೇಕ ಲಿಂಗಾಯತ್‌ ಧರ್ಮ ಮಾನ್ಯತೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಒತ್ತಾಯಿಸಿದರು. ಮುಖಂಡರಾದ ಶ್ರೀಮಂತ ಬಿರಾದಾರ, ಸದಾಶಿವ ಮೇತ್ರಿ ಮಾತನಾಡಿದರು.

ಈ ಸಂದರ್ಭದಲ್ಲಿ ಗೋವಿಂದ್‌ ಭಟ್‌, ರಾಜುಕುಮಾರ ಬಡದಾಳ, ಹಣಂತ್ರಾಯ ಬಿರಾದಾರ, ಮಹಾದೇವ, ಭಗವಂತ ವಗ್ಗೆ, ರವಿ ಗೌರ, ಅರುಣಕುಮಾರ ಹೂಗಾರ, ನಿಂಗೊಂಡಪ್ಪ, ಶಿವಬಸಪ್ಪ, ಬಸವರಾಜ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next