ಅಲ್ಲದೇ ಒಬಿಸಿಗಳಲ್ಲಿ ಕೆನೆಪದರಕ್ಕೆ ಸೇರಿಸುವ ಆದಾಯದ ಮಾನದಂಡವನ್ನು ವಾರ್ಷಿಕ 8 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಏರಿಸಲು ಕೇಂದ್ರವನ್ನು ಒತ್ತಾಯಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲು ಸಹ ಸಂಪುಟ ನಿರ್ಧರಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಕಚೇರಿ, ಈ ಅಧ್ಯಾದೇಶವನ್ನು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದೆ.
Advertisement
ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಶರದ್ ಪವಾರ್ ಅವರ ನೇತೃತ್ವದ ಎನ್‌ಸಿಪಿ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ 30 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ಮೈತ್ರಿಕೂಟಕ್ಕೆ ಶಾಕ್ ನೀಡಿತ್ತು. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆ ಗೆಲ್ಲಲು ಆಡಳಿತ ಮೈತ್ರಿಕೂಟ ಈಗಿನಿಂದಲೇ ಯೋಜನೆ ಮಾಡುತ್ತಿದೆ ಎನ್ನಲಾಗುತ್ತಿದೆ.