ಯಾದಗಿರಿ: ಅಂಬೇಡ್ಕರ್ ಆದರ್ಶ ಮತ್ತು ಗುಣಗಳನ್ನು ಇಂದಿನ ಪೀಳಿಗೆ ಮೈಗೂಡಿಸಿಕೊಂಡು, ಅಂಬೇಡ್ಕರ್ ಅವರಂತೆ ದುಡಿದು ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಕರೆ ನೀಡಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಡಾ| ಬಿ.ಆರ್. ಅಂಬೇಡ್ಕರ್ ಜಯಂತುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಬೇಡ್ಕರ್ ವ್ಯಕ್ತಿತ್ವವು ಯಾವಾಗಲೂ ಕೆಳವರ್ಗದವರ ಧ್ವನಿಯಾಗಿ ರಾಜಕೀಯವಾಗಿ, ಶೈಕ್ಷಣಿಕವಾಗಿ ಪ್ರತಿಯೊಬ್ಬರೂ ಮುಂದೆ ಬರಬೇಕು ಎನ್ನುವ ಉದ್ದೇಶದಿಂದ ಮೀಸಲಾತಿಯನ್ನು ತರುವ ಜೊತೆಗೆ ರೈತರ, ಕಾರ್ಮಿಕರ ಮಹಿಳೆಯರ ಪರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಕಷ್ಟು ಶ್ರಮಿಸಿದ ಮಹಾನ್ ನಾಯಕರಾಗಿದ್ದರು ಎಂದು ಗುಣಗಾಣ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಶ್ಯಾಂಸನ್ ಮ್ಯಾಳಿಕೇರಿ, ಭಾಗಪ್ಪ ಬೆಳ್ಳಿ, ಶಿವಪ್ಪ ಗಿರೆಪೊ°àರ್, ರಾಮಣ್ಣ ಕಲ್ಲದೇವನಳ್ಳಿ, ಚಂದ್ರ ಚಕ್ರವರ್ತಿ, ಗುರುನಾಥ ತಲಾರಿ ಅವರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮಕ್ಕು ಮುನ್ನ ಅಂಬೇಡ್ಕರ್ ಜಯಂತಿ ಪ್ರಯುಕ್ತ ನಗರದ ಅಂಬೇಡ್ಕರ್ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಗಿರಿಜಮ್ಮ ಎಸ್. ರೋಟ್ನಡಿಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಎಸ್.ಚಂಡ್ರಿಕಿ, ನಗರಸಭೆಯ ಅಧ್ಯಕ್ಷ ವಿಲಾಸ ಬಿ.ಪಾಟೀಲ್, ನಗರಸಭೆಯ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್, ಡಾ.ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.