Advertisement

ನುಡಿದಂತೆ ನಡೆದ ಪ್ರಧಾನಿ ನರೇಂದ್ರ ಮೋದಿ: ಚರಂತಿಮಠ 

05:16 PM Aug 08, 2018 | |

ಬಾಗಲಕೋಟೆ: ದೇಶದ ಹಿಂದುಳಿದ ಜನರ ಸಮಗ್ರ ಅಭಿವೃದ್ಧಿ ಹಾಗೂ ಕಾನೂನುಬದ್ಧ ಯೋಜನೆ ಕಲ್ಪಿಸಲು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂವಿಧಾನಾತ್ಮಕ ಸ್ಥಾನಮಾನ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರೆ. ಕಾಂಗ್ರೆಸ್‌ ನ ವಿರೋಧದ ಮಧ್ಯೆಯೂ ಆಯೋಗಕ್ಕೆ ಸಂವಿಧಾನಬದ್ಧ ಮಾನ್ಯತೆ ಕಲ್ಪಿಸಿರುವುದು ದೇಶದ ಇತಿಹಾಸದಲ್ಲೇ ದಾಖಲೆಯಾಗಿದೆ ಎಂದು ಬಾಗಲಕೋಟೆಯ ಬಿಜೆಪಿ ಶಾಸಕ ಡಾ|ವೀರಣ್ಣ ಚರಂತಿಮಠ ಹೇಳಿದರು.

Advertisement

ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ (ಓಬಿಸಿ)ದಿಂದ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು. ದೇಶದ ಹಿಂದುಳಿದ ವರ್ಗಗಳ ಜನರಿಗಾಗಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆದರೆ, ಹಿಂದುಳಿದವರ ವಿರೋಧಿಯಾಗಿರುವ ಕಾಂಗ್ರೆಸ್‌, ಈ ಆಯೋಗ ರಚನೆ ಹಾಗೂ ಸಂವಿಧಾನಬದ್ಧ ಮಾನ್ಯತೆ ನೀಡಲು ವಿರೋಧ ಮಾಡುತ್ತ ಬಂದಿತ್ತು. ಈಚೆಗೆ ರಾಜ್ಯಸಭೆಯಲ್ಲಿ ಈ ಆಯೋಗಕ್ಕೆ ಸಂವಿಧಾನಬದ್ಧ ಮಾನ್ಯತೆ ನೀಡಲು 156 ಮತಗಳು ಬಂದಿರುವುದು ದಾಖಲೆಯೇ ಸರಿ ಎಂದರು.

ಎಲ್ಲರೊಂದಿಗೆ, ಎಲ್ಲರ ವಿಕಾಸ ಎಂಬ ಗುರಿಯೊಂದಿಗೆ ಮುನ್ನೆಡೆ ಬಿಜೆಪಿ ಹಾಗೂ ಎನ್‌ ಡಿಎ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ದೇಶದ ಹಿಂದುಳಿದ ಜನಾಂಗಗಳ ಸಮಗ್ರ ಅಭಿವೃದ್ಧಿಗೆ ಈ ಆಯೋಗ ರಚನೆ ಅವಶ್ಯಕವಾಗಿತ್ತು. ಅದನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಡೇರಿಸಿದೆ ಎಂದು ತಿಳಿಸಿದರು.

ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ನಾಗಪ್ಪ ಅಂಬಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ, ಗ್ರಾಮೀಣ ಘಟಕದ ಅಧ್ಯಕ್ಷ ರಾಜಶೇಖರ ಮುದೇನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ರೇವಣಕರ, ಮುತ್ತು ಕುರುಬರ, ಶಂಕರ ಗಲಗ, ಶಾಂತಪ್ಪ ಬಾಡದ, ಬಸವರಾಜ ನಾಶಿ, ಸುರೇಶ ಕೊಣ್ಣೂರ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next