Advertisement
ನಗರದ ಡಿಎಆರ್ ಮೈದಾನದಲ್ಲಿ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ಠ… ಧ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸ್, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಂದ ಧ್ವಜ ವಂದನೆ ಸ್ವೀಕರಿಸಿದರು.
ಬರುವ ಶೈಕ್ಷಣಿಕ ವರ್ಷದಿಂದ ಪಠ್ಯದಲ್ಲಿ ಸಂವಿಧಾನ ಪೀಠಿಕೆ ಮುದ್ರಿಸಲು ನಿರ್ಧರಿಸಲಾಗಿದೆ. ಅದೇ ರೀತಿ ಹೋಬಳಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಶೈಕ್ಷಣಿಕ ಸುಧಾರಣೆಗಾಗಿ ಸರ್ಕಾರ ಸಾಕಷ್ಟು ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಶಿಕ್ಷಕರ ಹುದ್ದೆಗಳ ಭರ್ತಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದರ ಜತೆಗೆ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಹೋಬಳಿಗಳಲ್ಲಿ ಕರ್ನಾಟಕ ಸಾರ್ವಜನಿಕ ಶಾಲೆ ಆರಂಭಿಸಿ 1ರಿಂದ 7ನೇ ತರಗತಿವರೆಗೆ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.
Related Articles
Advertisement
ನಂತರ ವಿವಿಧ ಶಾಲೆಗಳ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರು, ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಲಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಸಾಧಕರನ್ನು ಸಚಿವರು ಸನ್ಮಾನಿಸಿದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್ .ಬೋಸರಾಜು, ಸಂಸದ ಬಿ.ವಿ.ನಾಯಕ, ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಆರ್‌ಡಿಎಸ್ ಅಧ್ಯಕ್ಷ ಅಬ್ದುಲ್ ಕರೀಂ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಮುಖಂಡರಾದ ಯಂಕಣ್ಣ ಯಾದವ, ಕೆ. ಶಾಂತಪ್ಪ, ಡಿಸಿ ಡಾ| ಬಗಾದಿ ಗೌತಮ, ಜಿಪಂ ಸಿಇಒ ಅಭಿರಾಮ ಜಿ. ಶಂಕರ, ಎಸ್‌ಪಿ ಡಿ. ಕಿಶೋರ ಬಾಬು ಸೇರಿ ವಿವಿಧ ಪಕ್ಷಗಳ ಮುಖಂಡರು, ಇಲಾಖೆ ಅಧಿಕಾರಿ, ಸಿಬ್ಬಂದಿ, ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಪೊಲೀಸ್ ಸಿಬ್ಬಂದಿ, ಶಾಲಾ ಮಕ್ಕಳಿಂದಲೂ ಪಥ ಸಂಚಲನ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರರು, ಹಿರಿಯ ನಾಗರಿಕರನ್ನು ಸಚಿವರು ಸನ್ಮಾನಿಸಿ ಗೌರವಿಸಿದರು.
ನೆಪ ಮಾತ್ರಗಣರಾಜ್ಯೋತ್ಸವ ನಿಮಿತ್ತ ಪೆರೇಡ್ ಮೈದಾನದಲ್ಲಿ ಪ್ರದರ್ಶಿಸಿದ ಸ್ತಬ್ಧ ಚಿತ್ರಗಳು ಕಾಟಾಚಾರಕ್ಕೆ ಎನ್ನುವಂತಿದ್ದವು. ಟ್ರಾμಕ್ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಧಾರಣೆ ಕುರಿತು ಜಾಗೃತಿ ಮೂಡಿಸುವ ಸ್ಥಬ್ಧ ಚಿತ್ರ ಪ್ರದರ್ಶಿಸಲಾಯತು. ಅದರ ಜತೆಗೆ ಆರೋಗ್ಯ ಇಲಾಖೆಯಿಂದ ಪೊಲಿಯೋ ಕುರಿತು ಜಾಗೃತಿ ಮೂಡಿಸುವ ಸ್ಥಬ್ಧ ಚಿತ್ರ ಪ್ರದರ್ಶಿಸಲಾಯಿತು.