Advertisement

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು 7 ಮಂದಿ ದುರ್ಮರಣ

02:24 PM Sep 14, 2022 | Team Udayavani |

ಗುಜರಾತ್: ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ಅಹಮದಾಬಾದ್‌ನಲ್ಲಿ ನಡೆದಿದೆ.

Advertisement

ಇದನ್ನೂ ಓದಿ:ಹಿಂದಿ ದಿವಸ್ ಸದ್ದು ಗದ್ದಲ: ಹುಚ್ಚಾಸ್ಪತ್ರೆಯಲ್ಲಿ ಮಾತನಾಡಿದಂತೆ ಮಾತಾಡ್ತೀರಾ?: ಸ್ಪೀಕರ್

ಸಂಜಯ್‌, ಜಗದೀಶ್‌, ಅಶ್ವಿನ್‌, ಮುಖೇಶ್‌, ರಾಜಮಲ್‌, ಮುಖೇಶ್ ಪಂಕಜಭಾಯಿ ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ.

ಗುಜರಾತ್‌ ವಿಶ್ವವಿದ್ಯಾನಿಲಯದ ಬಳಿಯಲ್ಲಿ ಕಟ್ಟಡದ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಈ ವೇಳೆ 7 ಮಹಡಿಯಿಂದ ಲಿಫ್ಟ್‌ ಕುಸಿದಿದೆ. ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ದೇಹಗಳನ್ನು ಸಿವಿಲ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳಿಗ್ಗೆ 8 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next