Advertisement

ವಯನಾಡ್‌ಗೆ ಕರ್ನಾಟಕದಿಂದ 100 ಮನೆ ನಿರ್ಮಾಣ: ಸಿಎಂ ಘೋಷಣೆಗೆ ರಾಹುಲ್‌ ಗಾಂಧಿ ಶ್ಲಾಘನೆ

10:01 PM Aug 03, 2024 | Team Udayavani |

ಬೆಂಗಳೂರು: ಗುಡ್ಡ ಕುಸಿತದಿಂದ ಕಂಗಾಲಾಗಿರುವ ಕೇರಳದ ನೆರವಿಗೆ ರಾಜ್ಯ ಸರಕಾರ ಮುಂದಾಗಿದ್ದು, ನಿರಾಶ್ರಿರಾದ ವಯನಾಡಿನ 100 ಕುಟುಂಬಗಳಿಗೆ ಮನೆ ಕಟ್ಟಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

Advertisement

ಈ ಸಂಬಂಧ “ಎಕ್ಸ್‌’ ವೇದಿಕೆಯಲ್ಲಿ ವಿಚಾರ ಹಂಚಿಕೊಂಡಿರುವ ಅವರು ನೆರೆಯ ಕೇರಳ ರಾಜ್ಯ ಸಂಕಷ್ಟದಲ್ಲಿದೆ. ನೂರಾರು ಮನೆಗಳು ಕೊಚ್ಚಿ ಹೋಗಿದ್ದು, ಜನರ ಬದುಕು ಬೀದಿಪಾಲಾಗಿದೆ. ಇಂಥ ಸಂಕಷ್ಟದ ಸಮಯದಲ್ಲಿ ಸಂತ್ರಸ್ತರ ಜತೆ ನಿಂತು ಅವರಿಗೆ ಮರಳಿ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂಬ ಉದ್ದೇಶದಿಂದ ಗುಡ್ಡ ಕುಸಿತದಲ್ಲಿ ಮನೆ ಕಳೆದುಕೊಂಡ 100 ಕುಟುಂಬಗಳಿಗೆ ಮನೆ ಕಟ್ಟಿಕೊಡಬೇಕೆಂದು ರಾಜ್ಯ ಸರಕಾರ ನಿರ್ಧರಿಸಿದೆ. ಈ ಸಂಬಂಧ ಶನಿವಾರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಜತೆ ಮಾತನಾಡಿ ನೆರವಿನ ಭರವಸೆ ನೀಡಿದ್ದೇನೆ ಎಂದು ಪ್ರಕಟಿಸಿದ್ದಾರೆ.

ಸಿದ್ದರಾಮಯ್ಯ ಅವರ ಪ್ರಕಟನೆಯನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ರಿಟ್ವೀಟ್‌ ಮಾಡಿ ಶ್ಲಾಘಿಸಿದ್ದು, “ಈ ಸಂಕಷ್ಟದ ಸಂದರ್ಭದಲ್ಲಿ ಕೇರಳದ ವಯನಾಡ್‌ನ‌ಲ್ಲಿ ನಡೆಯುತ್ತಿರುವ ಪುನರ್ವಸತಿ ಕಾರ್ಯಕ್ಕೆ ಕರ್ನಾಟಕದ ಜನತೆ ಹಾಗೂ ಸರಕಾರ ಮುಂದಾಗಿರುವುದನ್ನು ತುಂಬು ಹೃದಯದಿಂದ ಶ್ಲಾ ಸುತ್ತೇನೆ. ರಾಜ್ಯ ಸರಕಾರಕ್ಕೆ ಧನ್ಯವಾದ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next