ತಿ.ನರಸೀಪುರ: ಬರಗಾಲವನ್ನು ಸಮರ್ಥವಾಗಿ ಎದುರಿಸಲು ಹಾಗೂ ಗ್ರಾಮೀಣ ಪ್ರದೇಶಗಳ ಜನರಿಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಹಳ್ಳಿಗಳನ್ನು ಕೇಂದ್ರಿಕರಿಸಿ ಆಯ್ದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ವರುಣಾ ವಿಧಾನಸಭಾ ಕ್ಷೇತ್ರದ ವಸತಿ ಯೋಜನೆಗಳ ಉಸ್ತುವಾರಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ತಾಲೂಕಿನ ಬಿಲಿಗೆರೆಹುಂಡಿ ಗ್ರಾಮದಲ್ಲಿ 7.95 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ಹಳ್ಳಿಗಳಲ್ಲಿ ಸಾಮಾನ್ಯವಾಗಿ ಬೇಸಿಯಲ್ಲಿ ಕುಡಿಯುವ ನೀರಿಗೆ ತತ್ವಾರ ತಲೆದೂರುವುದು ಸಾಮಾನ್ಯ, ಬರಗಾಲದಲ್ಲಿ ಕುಡಿಯುವ ನೀರಿನ ಕೊರತೆಯನ್ನು ನಿವಾರಣೆ ಮಾಡಿ, ಕೇವಲ 2 ರೂಗೆ ಶುದ್ಧ ಕುಡಿಯುವ ನೀರನ್ನು ಹಳ್ಳಿಗಾಡಿನ ಜನರಿಗೆ ನೀಡುವ ಉದ್ದೇಶದಿಂದ ಪ್ರಮುಖ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗಿದೆ ಎಂದರು.
ವರುಣಾ ವಿಧಾನಸಭಾ ಕ್ಷೇತ್ರದ ಬಿಲಿಗೆರೆಹುಂಡಿ ಸೇರಿದಂತೆ ಹುಣಸೂರು, ಮುತ್ತತ್ತಿ, ಹಿಟ್ಟುವಳ್ಳಿ, ತುಂಬಲ, ಪಟ್ಟೇಹುಂಡಿ, ರಂಗನಾಥಪುರ ಹಾಗೂ ಇನ್ನಿತರ ಗ್ರಾಮಗಳಲ್ಲಿ ತಲಾ 7.95 ಲಕ್ಷ ರೂಗಳ ವೆಚ್ಚದಲ್ಲಿಯೇ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಸ್ಥಳೀಯರು ಘಟಕಗಳಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು. ಸ್ಥಳೀಯ ಗ್ರಾಪಂಗಳು ಕೂಡ ನಿರ್ವಹಣೆಯನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಕುಡಿಯಲಿಕ್ಕೆ ಶುದ್ಧ ನೀರನ್ನು ಬಳಸಬೇಕೆಂದು ಸಲಹೆ ನೀಡಿದರು.
ಜಿಪಂ ಸದಸ್ಯೆ ಜಯಮ್ಮ ಶಿವಸ್ವಾಮಿ, ತಾಪಂ ಸದಸ್ಯ ಎಂ.ರಮೇಶ, ಕಿರಗಸೂರು ಗ್ರಾಪಂ ಅಧ್ಯಕ್ಷ ಎನ್.ಅಶ್ವಿನ್, ಉಪಾಧ್ಯಕ್ಷೆ ಚಂದ್ರಮ್ಮ, ಸದಸ್ಯೆ ಚಿಕ್ಕತಾಯಮ್ಮ ನಂಜುಂಡೇಗೌಡ, ಕೆಎಂಎಫ್ ನಿರ್ದೇಶಕ ಕೆ.ಸಿ.ಬಲರಾಂ, ಜಿಪಂ ಮಾಜಿ ಸದಸ್ಯ ಕೆ.ಮಹದೇವ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಮಹದೇವಣ್ಣ, ಕೆಆರ್‌ಐಡಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಿ.ಪ್ರಭುಶಂಕರ್,
-ಸಹಾಯಕ ಎಂಜಿನಿಯರ್ ಮಂಜುನಾಥ್, ವರುಣಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮುದ್ದೇಗೌಡ, ಕುರುಬರ ಸಂಘದ ಅಧ್ಯಕ್ಷ ಟಿ.ಎಸ್.ಪ್ರಶಾಂತ್‌ಬಾಬು, ತಾಪಂ ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಗುತ್ತಿಗೆದಾರರಾದ ಬಿ.ಮಂಟೇಲಿಂಗಪ್ಪ, ನಾಗರಾಜು, ಮುಖಂಡರಾದ ಮಹದೇವಸ್ವಾಮಿ, ಯರಗನಹಳ್ಳಿ ರಂಗರಾಮು, ಮನ್ನೇಹುಂಡಿ ಮಹೇಶ, ಎನ್.ಸೋಮು, ಸಂತೃಪ್ತಿಕುಮಾರ್ ಹಾಗೂ ಇನ್ನಿತರರು ಹಾಜರಿದ್ದರು.