Advertisement

ಶೀಘ್ರವೇ ಸುಸಜ್ಜಿತ ಗುರುಭವನ ನಿರ್ಮಾಣ

03:53 PM Sep 28, 2018 | Team Udayavani |

ಬಳ್ಳಾರಿ: ಜಿಲ್ಲೆಯ ಶಿಕ್ಷಕರ ಹಲವು ವರ್ಷಗಳ ಬೇಡಿಕೆಯಾಗಿ ಉಳಿದಿದ್ದ ಗುರುಭವನ ನಿರ್ಮಾಣಕ್ಕೆ ಚಾಲನೆ ತೊರೆತಿದ್ದು, ಶೀಘ್ರದಲ್ಲೇ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತವಾದ ಗುರುಭವನ ತಲೆಯೆತ್ತಲಿದೆ ಎಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದರು.

Advertisement

ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯಲ್ಲಿನ ಗುರುಭವನದ ಆವರಣದಲ್ಲಿ ಗುರುವಾರ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌
ಅವರ 130ನೇ ಜನ್ಮದಿನಾಚರಣೆ ನಿಮಿತ್ತ ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಜಿಲ್ಲೆಯ ಶಿಕ್ಷಕರಿಗೆ ಈ ಹಿಂದೆ ನೀಡಿದ್ದ ಭರವಸೆಯಂತೆ ಗುರುಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಸಹಕಾರದಿಂದ 6.5 ಕೋಟಿ ರೂ. ವೆಚ್ಚದಲ್ಲಿ ಗುರುಭವನ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ. ಅದಕ್ಕೆ ಮಾಜಿ ರಾಷ್ಟ್ರಪತಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಹೆಸರು ನಾಮಕರಣ ಮಾಡಬೇಕು ಎಂದು ಅವರು ಕೋರಿದರು.

ಈ ಹಿಂದೆ ಭಟ್ಕಳದಲ್ಲಿ ಸೇವೆ ಸಲ್ಲಿಸುವಾಗ ಅಧಿಕಾರಿಗಳಿಗೆ ಕಟ್ಟಡ ನಿರ್ಮಾಣ ಮಾಡುವ ಭರವಸೆ ನೀಡಲಾಗಿತ್ತು.
ಶಂಕುಸ್ಥಾಪನೆ ನೆರವೇರಿಸಿದ ಮರು ದಿನವೇ ಉನ್ನತ ಹುದ್ದೆಗೆ ಏರಿರುವೆ. ನಂತರ ಆ ಕಟ್ಟಡವನ್ನು ನಾನೇ ಉದ್ಘಾಟನೆ ಮಾಡಿರುವೆ ಎಂದ ಅವರು, ನಿಮ್ಮೆಲ್ಲರ ಬೆಡಿಕೆಯಂತೆ ನಗರದಲ್ಲಿ ಗುರುಭವನ ನಿರ್ಮಾಣ ಮಾಡುವ ಭರವಸೆ ನೀಡಿದ್ದೆ. ಅದಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿದ್ದು, ಮರುದಿನ ವರ್ಗಾವಣೆಯಾದರೂ ಆಗಬಹುದು ಅಥವಾ ಉನ್ನತ ಹುದ್ದೆಗೆ ಏರಬಹುದು. ಸರ್ಕಾರ ನನ್ನ ಸೇವೆಯನ್ನು ಗುರುತಿಸಿ ಉನ್ನತ ಹುದ್ದೆ ನೀಡಿದರೆ ಖಂಡಿತ ಶಿಕ್ಷಣ ಇಲಾಖೆಗೆ ಬಂದು, ಈ ಕಟ್ಟಡವನ್ನು ನಾನೇ ಉದ್ಘಾಟನೆ ಮಾಡುತ್ತೇನೆ ಎಂದು ತಿಳಿಸಿದರು.

ಶಿಕ್ಷಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಮಹಾತ್ಮಗಾಂಧಿ ಬಡಾವಣೆಯನ್ನು ಸೃಷ್ಟಿ ಮಾಡಲಾಗಿದೆ. ಅದರಲ್ಲಿ 10 ಸಾವಿರ ಮನೆಗಳನ್ನು ನಿರ್ಮಾಣ ಮಾಡಲಿದ್ದು, ಅದರಲ್ಲಿ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಲಾಗುವುದು. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸರ್ಕಾರ ನಿಗದಿಪಡಿಸಿದ ದರದಲ್ಲಿ ಶಿಕ್ಷಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು. 

Advertisement

ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ಶಿಕ್ಷಕರ ಹಲವು ವರ್ಷಗಳ ಬೇಡಿಕೆ ಇಂದು ಈಡೇರಿದಂತಾಗಿದೆ. ಶೀಘ್ರದಲ್ಲೇ 300 ರಿಂದ 400 ಜನರ ಆಸನಗಳ ವ್ಯವಸ್ಥೆಯುಳ್ಳ ಗುರುಭವನ ನಿರ್ಮಾಣವಾಗಲಿದೆ. ಜಿಲ್ಲಾಧಿಕಾರಿಗಳ ಶ್ರಮದಿಂದ ಫಲಿತಾಂಶದಲ್ಲಿ ಹಿಂದುಳಿದ್ದ ನಮ್ಮ ಜಿಲ್ಲೆಯನ್ನು ಪ್ರಸಕ್ತ ವರ್ಷ 10ನೇ ಸ್ಥಾನ ತರುವಲ್ಲಿ ಯಶಸ್ವಿಯಾಗಿದ್ದಾರೆ. ಬರುವ ವರ್ಷ ಜಿಲ್ಲೆಯನ್ನು 5ನೇ ಸ್ಥಾನಕ್ಕೆ ತರಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ಡಿಡಿಪಿಐ ಶ್ರೀಧರನ್‌, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ ಮಾತನಾಡಿದರು. ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್‌
ಭಾವಚಿತ್ರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಟಿ.ಮಲ್ಲೇಶಪ್ಪ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಸೌಭಾಗ್ಯ ತಿರುಮಲ, ಮೇಯರ್‌ ಸುಶಿಲಾಬಾಯಿ, ತಾಪಂ ಅಧ್ಯಕ್ಷೆ ರಮೀಜಾ ಬೀ, ಮಾಜಿ ಮೇಯರ್‌ ನಾಗಮ್ಮ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಅರುಣ ಪ್ರತಾಪರೆಡ್ಡಿ, ಅಧ್ಯಕ್ಷ ಡಾ| ಕೆ.ಹನುಮಂತಪ್ಪ, ರಾಯಪ್ಪ ರೆಡ್ಡಿ, ಬಿಇಒ ವೆಂಕಟೇಶ ರಾಮಚಂದ್ರಪ್ಪ, ಖೈರುನ್ನಿಸಾ ಬೇಗಂ ಸೇರಿದಂತೆ ಶಿಕ್ಷಕರು ಪಾಲ್ಗೊಂಡಿದ್ದರು. 

ಶಿಕ್ಷಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಮಹಾತ್ಮಗಾಂಧಿ ಬಡಾವಣೆ ಸೃಷ್ಟಿ ಮಾಡಲಾಗಿದೆ. ಅದರಲ್ಲಿ 10 ಸಾವಿರ ಮನೆ ನಿರ್ಮಿಸಲಿದ್ದು, ಅದರಲ್ಲಿ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಲಾಗುವುದು. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸರ್ಕಾರ ನಿಗದಿಪಡಿಸಿದ ದರದಲ್ಲಿ ಶಿಕ್ಷಕರಿಗೆ ಮನೆ ಹಂಚಿಕೆ ಮಾಡಲಾಗುವುದು.

ಬಳ್ಳಾರಿ: ಜಿಲ್ಲೆಯ ಶಿಕ್ಷಕರ ಹಲವು ವರ್ಷಗಳ ಬೇಡಿಕೆಯಾಗಿ ಉಳಿದಿದ್ದ ಗುರುಭವನ ನಿರ್ಮಾಣಕ್ಕೆ ಚಾಲನೆ ತೊರೆತಿದ್ದು, ಶೀಘ್ರದಲ್ಲೇ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತವಾದ ಗುರುಭವನ ತಲೆಯೆತ್ತಲಿದೆ ಎಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯಲ್ಲಿನ ಗುರುಭವನದ ಆವರಣದಲ್ಲಿ ಗುರುವಾರ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌
ಅವರ 130ನೇ ಜನ್ಮದಿನಾಚರಣೆ ನಿಮಿತ್ತ ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ
ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಜಿಲ್ಲೆಯ ಶಿಕ್ಷಕರಿಗೆ ಈ ಹಿಂದೆ ನೀಡಿದ್ದ ಭರವಸೆಯಂತೆ ಗುರುಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಸಹಕಾರದಿಂದ 6.5 ಕೋಟಿ ರೂ.
ವೆಚ್ಚದಲ್ಲಿ ಗುರುಭವನ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ. ಅದಕ್ಕೆ ಮಾಜಿ ರಾಷ್ಟ್ರಪತಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಹೆಸರು ನಾಮಕರಣ ಮಾಡಬೇಕು ಎಂದು ಅವರು ಕೋರಿದರು.

ಈ ಹಿಂದೆ ಭಟ್ಕಳದಲ್ಲಿ ಸೇವೆ ಸಲ್ಲಿಸುವಾಗ ಅಧಿಕಾರಿಗಳಿಗೆ ಕಟ್ಟಡ ನಿರ್ಮಾಣ ಮಾಡುವ ಭರವಸೆ ನೀಡಲಾಗಿತ್ತು.
ಶಂಕುಸ್ಥಾಪನೆ ನೆರವೇರಿಸಿದ ಮರು ದಿನವೇ ಉನ್ನತ ಹುದ್ದೆಗೆ ಏರಿರುವೆ. ನಂತರ ಆ ಕಟ್ಟಡವನ್ನು ನಾನೇ ಉದ್ಘಾಟನೆ ಮಾಡಿರುವೆ ಎಂದ ಅವರು, ನಿಮ್ಮೆಲ್ಲರ ಬೆಡಿಕೆಯಂತೆ
ನಗರದಲ್ಲಿ ಗುರುಭವನ ನಿರ್ಮಾಣ ಮಾಡುವ ಭರವಸೆ ನೀಡಿದ್ದೆ. ಅದಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿದ್ದು,
ಮರುದಿನ ವರ್ಗಾವಣೆಯಾದರೂ ಆಗಬಹುದು ಅಥವಾ ಉನ್ನತ ಹುದ್ದೆಗೆ ಏರಬಹುದು. ಸರ್ಕಾರ ನನ್ನ ಸೇವೆಯನ್ನು
ಗುರುತಿಸಿ ಉನ್ನತ ಹುದ್ದೆ ನೀಡಿದರೆ ಖಂಡಿತ ಶಿಕ್ಷಣ ಇಲಾಖೆಗೆ ಬಂದು, ಈ ಕಟ್ಟಡವನ್ನು ನಾನೇ ಉದ್ಘಾಟನೆ ಮಾಡುತ್ತೇನೆ ಎಂದು ತಿಳಿಸಿದರು.

ಶಿಕ್ಷಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಮಹಾತ್ಮಗಾಂಧಿ ಬಡಾವಣೆಯನ್ನು ಸೃಷ್ಟಿ ಮಾಡಲಾಗಿದೆ. ಅದರಲ್ಲಿ 10 ಸಾವಿರ
ಮನೆಗಳನ್ನು ನಿರ್ಮಾಣ ಮಾಡಲಿದ್ದು, ಅದರಲ್ಲಿ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಲಾಗುವುದು. ಈಗಾಗಲೇ ಟೆಂಡರ್‌
ಪ್ರಕ್ರಿಯೆ ಪೂರ್ಣಗೊಂಡಿದ್ದು, ಸರ್ಕಾರ ನಿಗದಿಪಡಿಸಿದ ದರದಲ್ಲಿ ಶಿಕ್ಷಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು. 

ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ಶಿಕ್ಷಕರ ಹಲವು ವರ್ಷಗಳ ಬೇಡಿಕೆ ಇಂದು
ಈಡೇರಿದಂತಾಗಿದೆ. ಶೀಘ್ರದಲ್ಲೇ 300 ರಿಂದ 400 ಜನರ ಆಸನಗಳ ವ್ಯವಸ್ಥೆಯುಳ್ಳ ಗುರುಭವನ ನಿರ್ಮಾಣವಾಗಲಿದೆ.
ಜಿಲ್ಲಾಧಿಕಾರಿಗಳ ಶ್ರಮದಿಂದ ಫಲಿತಾಂಶದಲ್ಲಿ ಹಿಂದುಳಿದ್ದ ನಮ್ಮ ಜಿಲ್ಲೆಯನ್ನು ಪ್ರಸಕ್ತ ವರ್ಷ 10ನೇ ಸ್ಥಾನ ತರುವಲ್ಲಿ ಯಶಸ್ವಿಯಾಗಿದ್ದಾರೆ. ಬರುವ ವರ್ಷ ಜಿಲ್ಲೆಯನ್ನು 5ನೇ ಸ್ಥಾನಕ್ಕೆ ತರಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ಡಿಡಿಪಿಐ ಶ್ರೀಧರನ್‌, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ ಮಾತನಾಡಿದರು. ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್‌
ಭಾವಚಿತ್ರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಟಿ.ಮಲ್ಲೇಶಪ್ಪ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಸೌಭಾಗ್ಯ ತಿರುಮಲ, ಮೇಯರ್‌ ಸುಶಿಲಾಬಾಯಿ, ತಾಪಂ ಅಧ್ಯಕ್ಷೆ ರಮೀಜಾ ಬೀ, ಮಾಜಿ ಮೇಯರ್‌ ನಾಗಮ್ಮ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಅರುಣ ಪ್ರತಾಪರೆಡ್ಡಿ, ಅಧ್ಯಕ್ಷ ಡಾ| ಕೆ.ಹನುಮಂತಪ್ಪ, ರಾಯಪ್ಪ ರೆಡ್ಡಿ, ಬಿಇಒ ವೆಂಕಟೇಶ ರಾಮಚಂದ್ರಪ್ಪ, ಖೈರುನ್ನಿಸಾ ಬೇಗಂ ಸೇರಿದಂತೆ ಶಿಕ್ಷಕರು ಪಾಲ್ಗೊಂಡಿದ್ದರು. 

ಶಿಕ್ಷಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಮಹಾತ್ಮಗಾಂಧಿ ಬಡಾವಣೆ ಸೃಷ್ಟಿ ಮಾಡಲಾಗಿದೆ. ಅದರಲ್ಲಿ 10 ಸಾವಿರ ಮನೆ ನಿರ್ಮಿಸಲಿದ್ದು, ಅದರಲ್ಲಿ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಲಾಗುವುದು. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸರ್ಕಾರ ನಿಗದಿಪಡಿಸಿದ ದರದಲ್ಲಿ ಶಿಕ್ಷಕರಿಗೆ ಮನೆ ಹಂಚಿಕೆ ಮಾಡಲಾಗುವುದು.
 ಡಾ| ರಾಮ್‌ ಪ್ರಸಾತ್‌ ಮನೋಹರ್‌, ಜಿಲ್ಲಾಧಿಕಾರಿ.

Advertisement

Udayavani is now on Telegram. Click here to join our channel and stay updated with the latest news.

Next