Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಜರಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಮಂಗಳೂರು ಗ್ರಾಮಾಂತರ, ಮಂಗಳೂರು ನಗರ ಮತ್ತು ಸುಳ್ಯದಲ್ಲಿ ಇದಕ್ಕಾಗಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
Related Articles
Advertisement
ಇಲಾಖೆ ಉಪನಿರ್ದೇಶಕ ಉಸ್ಮಾನ್ ಮಾತ ನಾಡಿ, 2024 ಎಪ್ರಿಲ್‌ನಿಂದ ಜೂನ್‌ವರೆಗೆ ಮಂಗಳೂರು ನಗರ ಮತ್ತು ಮಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ತಲಾ ಒಂದೊಂದು ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿದೆ. ಒಂದು ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿ ಒಂದು ವರ್ಷ ಜೈಲು ಶಿಕ್ಷೆ ವಿ ಧಿಸಲಾಗಿದೆ ಎಂದು ಹೇಳಿದರು.
ತಾಯಂದಿರ ಸಭೆ ಹಾಗೂ ಮಕ್ಕಳ ರಕ್ಷಣ ಸಮಿತಿ ಸಭೆಗಳಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಜೂ.21ರಿಂದ ಅ.4ರ ವರೆಗೆ 100 ದಿನಗಳ ವಿಶೇಷ ಕಾರ್ಯಕ್ರಮದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದರು.
ಬಾಲ್ಯ ವಿವಾಹದ ದುಷ್ಪರಿಣಾಮ: ಅರಿವು ಕಾರ್ಯಾಗಾರಬಾಲ್ಯ ವಿವಾಹದ ದುಷ್ಪರಿಣಾಮಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಎಲ್ಲ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ, ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ತಾಯಂದಿರ ಸಭೆ, ಸ್ತ್ರೀಶಕ್ತಿ ಸಭೆ, ಬಾಲವಿಕಾಸ ಸಮಿತಿ ಸಭೆಗಳಲ್ಲಿ ಹಾಗೂ ಶಾಲಾ ಶಿಕ್ಷಕರಿಗೆ ಪಿಯುಸಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪನಿರ್ದೇಶಕ ಉಸ್ಮಾನ್ ಹೇಳಿದರು. ಗೌರವಧನ ಹೆಚ್ಚಳಕ್ಕೆ ಮನವಿ
ಜಿಲ್ಲೆಯಲ್ಲಿರುವ ಸಾಂತ್ವನ ಕೇಂದ್ರಗಳ ಸಿಬಂದಿ ಪಾಳಿಯಲ್ಲಿ ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದು, ಹಲವಾರು ವರ್ಷಗಳಿಂದ ಗೌರವಧನ ಹೆಚ್ಚಾಗದ ಕಾರಣ ಸಿಬಂದಿ ಗೌರವಧನವನ್ನು ಹೆಚ್ಚಿಸುವಂತೆ ಸಭೆಯಲ್ಲಿ ಮನವಿ ಸಲ್ಲಿಸಿದರು. ಮಹಿಳೆಯರ ಸಬಲೀಕರಣಕ್ಕಾಗಿ ಹುಟ್ಟಿಕೊಂಡಿರುವ ಸ್ತ್ರೀಶಕ್ತಿ ಸಂಘಗಳಲ್ಲಿ ಸ್ತ್ರೀಶಕ್ತಿ ಸಹಕಾರಿ ಬ್ಯಾಂಕ್‌ಗಳಿಗೆ ಸರಕಾರದಿಂದ ಕಡಿಮೆ ಬಡ್ಡಿಯಲ್ಲಿ ಠೇವಣಿ ನೀಡಬೇಕು. ಇದರಿಂದ ಹಲವಾರು ಮಹಿಳೆಯರಿಗೆ ಹೆಚ್ಚಿನ ಸಾಲವನ್ನು ನೀಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಸ್ತ್ರೀಶಕ್ತಿ ಸಂಘದ ಪದಾ ಧಿಕಾರಿಗಳು ಸಭೆಯಲ್ಲಿ ಅಧ್ಯಕ್ಷರ ಮೂಲಕ ಸರಕಾರಕ್ಕೆ ಮನವಿ ಮಾಡಿದರು.