Advertisement
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರಕಾರಕ್ಕೆ ವರ್ಷ ಪೂರ್ಣಗೊಂಡಿದ್ದು, ಈ ಸರಕಾರದ ಬಗ್ಗೆ ಜನರು ಆಕ್ರೋಶಗೊಂಡಿದ್ದಾರೆ. ಅಸಮರ್ಥ ಸರಕಾರವಾದ್ದರಿಂದ ಕಾನೂನು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಸರಕಾರದ ಆಡಳಿತ ವೈಖರಿ ಗಮನಿಸಿದರೆ ಲಾಲು ಪ್ರಸಾದ್ ಯಾದವ್ ಅವರ ಬಿಹಾರ ನೆನಪಾಗುತ್ತಿದೆ ಎಂದರು.
ಮೈಸೂರು: ರಾಜ್ಯದ ಶಿಕ್ಷಣ ಸಚಿವರು ನಾವು ಕರ್ನಾಟಕದಲ್ಲಿ ಇದ್ದೇವೆ ಎನ್ನುವುದನ್ನೇ ಮರೆತುಬಿಟ್ಟಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರೆ, ಶಿಕ್ಷಣ ಸಚಿವರಿಗೆ ಕನ್ನಡ ಬರಬೇಕು ಎನ್ನುವ ಕಾನೂನು ಎಲ್ಲಿದೆ ಎಂದು ಸಮರ್ಥಿಸಿಕೊಳ್ಳುತ್ತಾರೆ. ಇಂತಹ ಶಿಕ್ಷಣ ಸಚಿವರನ್ನು ಪಡೆದ ನಾವೇ ಧನ್ಯರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.
Related Articles
Advertisement
ಗ್ಯಾರಂಟಿ ಯೋಜನೆಯಲ್ಲೇ ಮುಳುಗಿದ ಸಿಎಂ: ಬಿವೈವಿಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದು ಒಂದು ವರ್ಷ ಕಳೆದಿದೆ. ಸಾಧನೆ ಶೂನ್ಯವಾಗಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ರಾಜ್ಯದ ಜನತೆ ಭ್ರಮನಿರಸನಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಕ್ಕಾಗಿ ಸಿಎಂ ಸಿದ್ದರಾಮಯ್ಯ ಯಾವುದೇ ಗುದ್ದಲಿ ಪೂಜೆ ನೆರವೇರಿಸಿಲ್ಲ. ಗ್ಯಾರಂಟಿ ಯೋಜನೆಯಲ್ಲಿಯೇ ಮುಳುಗಿದ್ದಾರೆ. ಅಲ್ಲದೆ ರಾಜ್ಯ ಸರಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಮುಂದಾಗಿದೆ. ರಾಜ್ಯದ ಜನತೆ ಇದರಿಂದ ತೊಂದರೆ ಅನುಭವಿಸುವಂತಾಗಿದೆ ಎಂದರು. ಹುಬ್ಬಳಿ ಮತ್ತು ಧಾರವಾಡದಲ್ಲಿ ಕೊಲೆ ಪ್ರಕರಣಗಳು ನಡೆದಿದ್ದರೆ, ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದು, ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಹಲವು ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಈ ಘಟನೆಗಳು ರಾಜ್ಯ ಸರಕಾರದ ಮುಸ್ಲಿಂ ತುಷ್ಟೀಕರಣಕ್ಕೆ ಸಾಕ್ಷಿಯಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ 4 ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಿದ್ದರೆ, ಜೆಡಿಎಸ್ 2 ಕ್ಷೇತ್ರದಲ್ಲಿ ಕಣದಲ್ಲಿದೆ. ಈ ಎಲ್ಲ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.