Advertisement
ಬಿಬಿಎಂಪಿ ವತಿಯಿಂದ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಹಮ್ಮಿಕೊಂಡಿದ್ದ “ಬಿಬಿಎಂಪಿ ರೋಷಣಿ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಬೇಕು ಎಂಬುದು ಸಮ್ಮಿಶ್ರ ಸರ್ಕಾರದ ಉದ್ದೇಶವಾಗಿದೆ. ಹಿಗಾಗಿ ಮಕ್ಕಳ ಜೀವ ರಕ್ಷಣೆಯ ಉದ್ದೇಶದಿಂದ ಶಾಶ್ವತ ಕಾಲುವೆಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಿದ್ದು, ಶಾಲೆಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಅನಿವಾರ್ಯತೆಯಿದೆ. ಅದರಂತೆ ರಾಜ್ಯದ ಸರ್ಕಾರಿ ಶಾಲೆಗಳ ದುರಸ್ತಿ ಹಾಗೂ ನವೀಕರಣಕ್ಕಾಗಿ ಇದೇ ಮೊದಲ ಬಾರಿಗೆ 1000 ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, ತ್ವರಿತವಾಗಿ ಹೊಸ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ತಿ ಕಾರ್ಯ ನಡೆಸಲಾಗುತ್ತದೆ ಎಂದು ಎಂದು ಹೇಳಿದರು.