ನೆಲಮಂಗಲ: ರಾಜ್ಯಾದ್ಯಂತ ಎಲ್ಲಾ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಬೇಕು, ತುಮಕೂರು ಸುತ್ತಮುತ್ತ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಬೇರೆ ರಾಜ್ಯ ಮತ್ತು ವಿದೇಶದಿಂದ ಬರುವ ಬಂಡವಾಳಗಾರರನ್ನು ಆಕರ್ಷಿಸುವ ಸಲುವಾಗಿ ಹೆಚ್ಚು ಅನುಕೂಲತೆಯನ್ನು ಕಲ್ಪಸಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಮಾಡಲಾಗು ತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.
ನೆಲಮಂಗಲ ತಾಲೂಕಿನ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿನ ಹಲವು ಹಂತದ ಕೈಗಾರಿಕಾ ಪ್ರದೇಶ ಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಮಾತ ನಾಡಿದರು.
ರಾಜಧಾನಿಗೆ ಹೆಚ್ಚು ಹತ್ತಿರವಿರುವ ತುಮಕೂರು ಜಿಲ್ಲೆಯವರೆಗೂ ವಿವಿಧ ಕೈಗಾರಿಕಾ ವಲಯಗಳನ್ನು ಸ್ಥಾಪಿಸುವ ಮೂಲಕ ಬೃಹತ್ ಕೈಗಾರಿಕಾ ವಲಯವನ್ನು ನಿರ್ಮಿಸಲಾಗುತ್ತದೆ. ಈ ಭಾಗದಲ್ಲಿ ಹೆಚ್ಚು ಬರಡು ಭೂಮಿ ಇರುವ ಕಾರಣ ಕೈಗಾರಿಕಾ ಪ್ರದೇಶಗಳಿಗೆ ಅನುಕೂಲವಾಗುತ್ತದೆ. ಕೃಷಿ ಭೂಮಿಗಳನ್ನು ಯಾವುದೇ ಕಾರಣಕ್ಕೂ ಸ್ವಾದೀನ ಪಡಿಸಿಕೊಳ್ಳಲಾಗುವುದಿಲ್ಲ. ಈ ಭಾಗದಲ್ಲಿ ಹೆಚ್ಚಾಗಿ ನೀರಿನ ಅಭಾವವಿದ್ದು, ಸಣ್ಣ ನೀರಾವರಿ ಸಚಿವರಾದ ಮಾಧುಸ್ವಾಮಿ ಅವರೊಂದಿಗೆ ಚರ್ಚಿಸಿ ಎತ್ತಿನಹೊಳೆ ಯೋಜನೆಯ ನೀರಾವರಿ ಯನ್ನು ಕೈಗಾರಿಕಾ ಪ್ರದೇಶಕ್ಕೆ ಅದಷ್ಟು ಬೇಗ ತರುವಲ್ಲಿ ಪಯತ್ನಿಸುತ್ತೇನೆ ಎಂದರು.
ಇದನ್ನೂ ಓದಿ:ಸಂಗೀತವೆಂಬ ದೀಪದಲ್ಲಿ ಬೆಳಗುತ್ತಿರುವ ‘ಉಜ್ವಲ’
ಸಮಸ್ಯೆಗಳ ಪಟ್ಟಿ: ಸೋಂಪುರ ಕೈಗಾರಿಕಾ ವಲಯ ಗಳಲ್ಲಿ 2009ರಿಂದ ರಸ್ತೆಗಳು ಮತ್ತು ವಿದ್ಯುತ್ ಹೊರತುಪಡಿಸಿದರೆ ಯಾವುದೇ ಮೂಲಭೂತ ಸೌಲಭ್ಯಗಳು ಲಭ್ಯವಾಗಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಈಗಾಗಲೇ ಕೈಗಾರಿಕಾ ಪ್ರದೇಶಗಳಲ್ಲಿನ ಸಮಸ್ಯೆ ಗಳಾದ ಅಗ್ನಿಶಾಮಕ ಠಾಣೆ, ಕುಡಿಯುವ ನೀರಿನ ಸಮಸ್ಯೆ, ಆಸ್ಪತ್ರೆ, ಪೋಲಿಸ್ ಠಾಣೆ ಯಂತಹ ಅಗತ್ಯ ಸಮಸ್ಯೆಗಳ ಪಟ್ಟಿಯನ್ನು ಪಡೆದಿದ್ದೇನೆ ಹಂತ ಹಂತ ವಾಗಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ ಎಂದರು. ಪರಿಶೀಲನೆ: ತಾಲೂಕಿನ ಸೋಂಪುರ ಕೈಗಾರಿಕಾ ಪ್ರದೇಶದ ಮೂರು ಮತ್ತು ನಾಲ್ಕನೆ ಹಂತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಮತ್ತು ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್‌ಗಳನ್ನು ಪರಿಶೀಲನೆ ನಡೆಸಿದರು ಹಾಗೂ ಹೊಸದಾಗಿ ತ್ಯಾಮಗೊಂಡ್ಲು ಹೋಬಳಿಯ ಓಬಳಾಪುರ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ಪ್ರದೇಶಕ್ಕೂ ಭೇಟಿನೀಡಿ ಕೃಷಿ ಭೂಮಿ ಅಥವಾ ಬರಡು ಭೂಮಿಯಾಗಿದೇಯ ಎಂದು ಪರಿಶೀಲನೆ ನಡೆಸಿದರು.
ತಾಲೂಕಿನ ಸೋಂಪುರ ಕೈಗಾರಿಕಾ ಸಂಘದ ಅಧ್ಯಕ್ಷರಾದ ಕಂಠಪ್ಪ, ತ್ರಿವೇಣಿ ಟರ್ಬೈನ್ ಕಂಪನಿ ಮುಖ್ಯಸ್ಥ ಪ್ರಶಾಂತ್ ಸೇರಿದಂತೆ ಕೈಗಾರಿಕಾ ಅಧಿಕಾರಿಗಳು ಹಾಜರಿದ್ದರು.
ಬರಡು ಭೂಮಿಗೆ ಆದ್ಯತೆ
ಸೋಂಪುರ ಕೈಗಾರಿಕಾ ಪ್ರದೇಶ ಮತ್ತು ತುಮ ಕೂರು ಸುತ್ತಮುತ್ತಲಿನ ಪ್ರದೇಶಗಳು ಹೆಚ್ಚು ಬರಡು ಭೂಮಿಯಾಗಿವೆ ಹಾಗೂ ರಾಜಧಾನಿ ಬೆಂಗಳೂರಿಗೆ ಹತ್ತಿರವಿದ್ದು, ಕೈಗಾರಿಕಾ ಪ್ರದೇಶ ಗಳಾಗಿ ಮಾರ್ಪಾಡು ಮಾಡಲಾಗುತ್ತಿದೆ. ಇದ್ದ ರಿಂದ ಸ್ಥಳೀಯ ರೈತರು ಮತ್ತು ನಿರುದ್ಯೋಗಿ ಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ಕೃಷಿ ಭೂಮಿ ಹೊಂದಿರುವ ರೈತರನ್ನು ಸಂಪರ್ಕಿಸಿ ಅವರ ಅಹವಾಲುಗಳನ್ನು ಸ್ವೀಕರಿಸಿ ನೀರಾವರಿ ಕೃಷಿ ಭೂಮಿಯಾಗಿದ್ದಾರೆ. ಕೈಗಾರಿಕಾ ಪ್ರದೇಶ ದಿಂದ ಕೈಬಿಡಲಾಗುತ್ತದೆ. ಈ ಕುರಿತಾಗಿ ಸ್ಥಳೀಯ ಶಾಸಕರು ಮತ್ತು ಉಸ್ತುವಾರಿ ಸಚಿವರ ಜತೆಯಲ್ಲಿ ಚರ್ಚಿಸಿ ತಿರ್ಮಾನಿಸಲಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.