ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮೂರು ಅಲೆಮಾರಿ ಶಾಲೆಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು, ಪ್ರಸಕ್ತ ಸಾಲಿನಿಂದಲೇ ಈ ಶಾಲೆಗಳು ಆರಂಭಗೊಳ್ಳಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬ್ಯಾಂಕ್ವೇಟ್ ಹಾಲ್ ನಲ್ಲಿ ಶುಕ್ರವಾರ ದಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಈಗಾಗಲೇ ರಾಜ್ಯದಲ್ಲಿ ನಾಲ್ಕು ಅಲೆಮಾರಿ ಶಾಲೆಗಳಿವೆ. ಅದರಲ್ಲಿ ಎರಡು ಶಾಲೆಗಳಿಗೆ ಕಟ್ಟಡಗಳಿಲ್ಲ. ಅವುಗಳಿಗೆ ತಲಾ ಆರು ಕೋಟಿ ಅನುದಾನ ಒದಗಿಸಲಾಗುವುದು ಎಂದರು.
ಇದನ್ನೂ ಓದಿ:ವಿದ್ಯುತ್ ಕೂಡಾ ಇಲ್ಲದ ಊರಿನಿಂದ ಬಂದ ನನಗೆ ಬಿಜೆಪಿ ಬಹಳಷ್ಟು ಕೊಟ್ಟಿದೆ: ಶೋಭಾ ಕರಂದ್ಲಾಜೆ
ಜತೆಗೆ ಮೂರು ಶಾಲೆಗಳನ್ನು ಆರಂಭಿಸಲಾಗುವುದು. ಬಜೆಟ್ ನಲ್ಲಿ ಇವುಗಳನ್ನು ಘೋಷಿಸಲಾಗಿತ್ತು. ಸರ್ಕಾರ ಈಗ ಅದನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.