ಮಲ್ಪೆ: ಬ್ಯಾಂಕಿನ ಪ್ರಗತಿಗೆ ಗ್ರಾಹಕರ ಸಹಕಾರ ಅಗತ್ಯ. ಸಿಬಂದಿಗಳು ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಇತರ ಬ್ಯಾಂಕ್‌ಗಳೊಂದಿಗೆ ಸ್ಪರ್ಧಾತ್ಮಕ ರೀತಿಯಲ್ಲಿ ವ್ಯವಹಾರ ನಡೆಸಬೇಕು. ಕರಾವಳಿಯ ಎಲ್ಲ ಮೀನುಗಾರ ಮಹಿಳೆಯರು, ಉದ್ಯಮಿಗಳು ಮಹಾಲಕ್ಷ್ಮೀ ಬ್ಯಾಂಕಿನೊಂದಿಗೆ ಹೆಚ್ಚು ವ್ಯವಹಾರ ನಡೆಸಿ ಬ್ಯಾಂಕಿನ ಪ್ರಗತಿಗೆ ಕೈಜೋಡಿಸಬೇಕು ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್ ಹೇಳಿದರು.
ಅವರು ಶನಿವಾರ ಮಹಾಲಕ್ಷ್ಮೀ ಕೋ - ಆಪರೇಟಿವ್ ಬ್ಯಾಂಕ್‌ನ ನವೀಕೃತ ಮಲ್ಪೆ ಶಾಖೆಯನ್ನುಉದ್ಘಾಟಿಸಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಮಹಾಲಕ್ಷ್ಮೀ ಬ್ಯಾಂಕ್ ಜನಸ್ನೇಹಿ ಸಹಕಾರಿ ಸಂಸ್ಥೆಯಾಗಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಶ್ಲಾ ಸಿದರು.
ಮುಖ್ಯ ಅತಿಥಿಯಾಗಿದ್ದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಯಾವ ಜಿಲ್ಲೆಗಳಲ್ಲಿ ಮೀನುಗಾರ ಸಮಾಜ ನೆಲೆಸಿದೆಯೋ ಅಲ್ಲೆಲ್ಲ ಬ್ಯಾಂಕಿನ ಶಾಖೆ ತೆರೆದು ಸೇವೆ ನೀಡಬೇಕು. ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲು ಪ್ರಯತ್ನಿಸಲಾಗುವುದು ಎಂದರು. ಬ್ಯಾಂಕಿನ ಹವಾನಿಯಂತ್ರಣ ವ್ಯವಸ್ಥೆಗೆ 5 ಲಕ್ಷ ರೂ. ದೇಣಿಗೆ ಘೋಷಿಸಿದರು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಬಿಲ್ಲವ ಸೇವಾ ಸಂಘ ಅಧ್ಯಕ್ಷ ದಿನೇಶ್ ಜಿ. ಸುವರ್ಣ, ಕೋಟ ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ. ಕುಂದರ್, ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಉಜ್ವಲ್ ಡೆವಲಪರ್ನ ಪುರುಷೋತ್ತಮ ಶೆಟ್ಟಿ, ಉಡುಪಿ ಕಿದಿಯೂರು ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಕಾರ್ತಿಕ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಹರಿಯಪ್ಪ ಕೋಟ್ಯಾನ್, ಉದ್ಯಮಿ ಆನಂದ ಪಿ. ಸುವರ್ಣ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ. ಅಮೀನ್, ವಿವಿಧ ಮೀನುಗಾರಿಕೆ ಸಂಘಟನೆಗಳ ಅಧ್ಯಕ್ಷರಾದ ಯಶೋಧರ ಅಮೀನ್, ಕಿಶೋರ್ ಡಿ. ಸುವರ್ಣ, ಕಿಶೋರ್ ಪಡುಕರೆ, ಹರಿಶ್ಚಂದ್ರ ಕಾಂಚನ್, ಎನ್.ಟಿ. ಅಮೀನ್, ಬೇಬಿ ಎಚ್. ಸಾಲ್ಯಾನ್, ಜಲಜಾ ಕೋಟ್ಯಾನ್, ಕೃಷ್ಣಪ್ಪ ಮರಕಾಲ, ಸುಧಾಕರ ಕುಂದರ್, ನಾರಾಯಣ ಕರ್ಕೇರ, ಜನಾರ್ದನ ತಿಂಗಳಾಯ, ದೇವದಾಸ್ ಕುಂದರ್, ರತ್ನಾಕರ ಸಾಲ್ಯಾನ್, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಜಿ.ಕೆ. ಶೀನಾ ಉಪಸ್ಥಿತರಿದ್ದರು.ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು. ಉಪಾಧ್ಯಕ್ಷ ಮಾಧವ ಸುವರ್ಣ ವಂದಿಸಿದರು.
50 ಕೋ.ರೂ. ಶೂನ್ಯ ಬಡ್ಡಿ ದರ ಸಾಲ
ಬ್ಯಾಂಕಿನ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಪ್ರಸ್ತಾವನೆಗೈದು, ಮಹಿಳಾ ಮೀನುಗಾರ ಸಹಕಾರಿಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ 50 ಕೋ.ರೂ. ಸಾಲ ನೀಡುವ ಯೋಜನೆ ರೂಪಿಸಲಾಗಿದೆ. ನಿರಂತರ 9 ವರ್ಷಗಳಿಂದ ಸದಸ್ಯರಿಗೆ ಶೇ. 18 ಡಿವಿಡೆಂಡ್ ನೀಡುತ್ತಿರುವ ಕರಾವಳಿಯ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಈ ಬ್ಯಾಂಕಿಗಿದೆ. ದ.ಕ., ಉಡುಪಿಯಲ್ಲಿ 8 ಶಾಖೆಗಳನ್ನು ಹೊಂದಿದ್ದು, ಉ.ಕ. ಮತ್ತು ಬೆಂಗಳೂರಿನಲ್ಲಿಯೂ ಶಾಖೆ ತೆರೆಯುವ ಯೋಜನೆ ಹಾಕಿಕೊಳ್ಳಲಾಗಿದೆ, ಸುರತ್ಕಲ್ ಶಾಖೆ ಸ್ವಂತ ಕಟ್ಟಡ ಹೊಂದಲಿದೆ ಎಂದರು.
ಗೌರವಾರ್ಪಣೆ
ಡಾಣ ರಾಜೇಂದ್ರ ಕುಮಾರ್, ಜಯಕರ ಶೆಟ್ಟಿ ಇಂದ್ರಾಳಿ, ಬ್ಯಾಂಕಿಗೆ ಒಳವಿನ್ಯಾಸ ರೂಪಿಸಿದ ಎಂಜಿನಿಯರ್ ಅರ್ಜುನ್ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. 3 ಮಹಿಳಾ ಮೀನುಗಾರ ಸಹಕಾರಿ ಸಂಘಗಳಿಗೆ 1.50 ಕೋ.ರೂ. ಸಾಲ ಮಂಜೂರಾತಿ ಪತ್ರ ವಿತರಿಸಲಾಯಿತು.