ಗಂಗೊಳ್ಳಿ: ತ್ರಾಸಿ ಗ್ರಾಮದ ಬೀಚ್ ಬಳಿ ಪಾರ್ಕ್ ನಲ್ಲಿ ಸೆ.15 ರಂದು ಕೆಲವು ಹುಡುಗರು ಕುಳಿತು ಗಾಂಜಾ ಸೇವಿಸುತ್ತಿರುವುದು ಕಂಡು ಬಂದಿದ್ದು,ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ವಿನಯ ಕೊರ್ಲಹಳ್ಳಿಯವರು ಖಚಿತ ಮಾಹಿತಿಯಂತೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದು, ಇಬ್ಬರು ಯುವಕರು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದ ಕಾರಣ ಕುಂದಾಪುರ ವೈಧ್ಯಾದಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಹರ್ಷ, ಮತ್ತು ಅವಿನಾಶ್ ಎಂಬ ಇಬ್ಬರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪವನ್ ನಾಯಕ್ ರವರು ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ ಕಂದಾವರ ಗ್ರಾಮದ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಗಾಂಜಾ ಸೇವಿಸುತ್ತಿರುವುದು ಕಂಡು ಬಂದಿದೆ.
ಆರೋಪಿ ಮದನ್‌ಕುಮಾರ್ (36) ಎಂಬಾತನನ್ನು ವಿಚಾರಿಸಿ ವೈದ್ಯಾಧಿಕಾರಿವರ ಮುಂದೆ ಹಾಜರುಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.