Advertisement

ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ಪ್ರಕರಣ ದಾಖಲು

08:48 PM Mar 26, 2023 | Team Udayavani |

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ತುಂಬೆ ಸಾರ್ವಜನಿಕ ಬಸ್‌ ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯನ್ನು ವಶಪಡಿಸಿಕೊಂಡಿದ್ದಾರೆ.

Advertisement

ತುಂಬೆ ಗ್ರಾಮದ ಮದಕ ನಿವಾಸಿ ಶೋಯೆಬ್‌ ಅಕ್ತರ್‌ ಆರೋಪಿಯಾಗಿದ್ದು, ಆತನ ಕುರಿತು ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್‌ಐ ಜಯಶ್ರೀ ಪ್ರಭಾಕರ ನೇತೃತ್ವದ ತಂಡ ಆತನ ವಿರುದ್ಧ ಪ್ರಕರಣ ದಾಖಲಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next