Advertisement

Contaminated water cases; ರಾಜ್ಯದೆಲ್ಲೆಡೆ ಕುಡಿಯುವ ನೀರಿನ ಪರೀಕ್ಷೆ: ಡಿಕೆಶಿ

11:47 PM May 23, 2024 | Team Udayavani |

ಬೆಂಗಳೂರು: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸಹಿತ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು. ವೈಯಾಲಿಕಾವಲ್‌ನ ಐಪಿಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರಾ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರು ಪರಿಶೀಲನೆಗೆ ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗಿದೆ ಎಂದರು. ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿರುವ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಲು ಸೂಚಿಸಲಾಗಿದೆ. ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.

Advertisement

ಸಮಸ್ಯೆ ಮರುಕಳಿಸಿದರೆ ಜಿಲ್ಲಾಧಿಕಾರಿಗಳೇ ಹೊಣೆ
ಮೈಸೂರು ತಾಲೂಕಿನಲ್ಲಿ ಎರಡು ಕಡೆ ಕಲುಷಿತ ಕುಡಿಯುವ ನೀರು ಸೇವನೆಯಿಂದ ಕಾಲರಾ ಉಂಟಾಗಿದೆ. ಒಬ್ಬರು ಸತ್ತು, 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಇನ್ನು ಮುಂದೆ ಕಲುಷಿತ ನೀರು ಸೇವನೆಯಿಂದ ಇಂತಹ ಸಮಸ್ಯೆಗಳು ಮರುಕಳಿಸಿದರೆ ಆಯಾ ಜಿಲ್ಲಾಧಿಕಾರಿಯೇ ಹೊಣೆ ಯಾಗಬೇಕಾಗುತ್ತದೆ ಎಂದು ಸಿಎಂ ಎಚ್ಚರಿಕೆ ನೀಡಿದರು.

ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದ ಯುವಕನ ಕುಟುಂಬಕ್ಕೆ 5 ಲ. ರೂ.ಪರಿಹಾರ
ಮೈಸೂರು: ತಾಲೂಕಿನ ಕೆ. ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಯುವಕ ಕನಕರಾಜು ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸರಕಾರದಿಂದ 5 ಲಕ್ಷ ರೂ.ಪರಿಹಾರ ಘೋಷಿಸಿದ ಮುಖ್ಯಮಂತ್ರಿಗಳು, ಮೃತರ ಸಹೋದರ ರವಿಗೆ ಉದ್ಯೋಗದ ಭರವಸೆ ನೀಡಿದರು.
ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಕನಕರಾಜು ಮೃತಪಟ್ಟರೆ, 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಘಟನೆ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಗ್ರಾಮಕ್ಕೆ ತೆರಳಿದ ಮುಖ್ಯಮಂತ್ರಿಗಳು ಗ್ರಾಮದಲ್ಲಿ ಅಸ್ವಸ್ಥರಿಗೆ ಕೈಗೊಂಡಿರುವ ತುರ್ತು ಚಿಕಿತ್ಸಾ ಕಾರ್ಯ ಹಾಗೂ ಕುಡಿಯುವ ನೀರು ಸಂಬಂಧ ಮಾಡಿರುವ ಕಾರ್ಯಗಳನ್ನು ಅವಲೋಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next