Advertisement
ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳೆಗೇರಿಗಳಲ್ಲಿ ಕುಡಿಯುವ ನೀರು ಮತ್ತು ಚರಂಡಿ ನೀರಿನ ಕೊಳವೆ ಮಾರ್ಗಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಇದಕ್ಕಾಗಿ ನೈರ್ಮಲ್ಯ ಅಭಿಯಾನ ಕೈಗೊಂಡು ಎಲ್ಲೆಲ್ಲಿ ಪ್ರತ್ಯೇಕ ಕೊಳವೆಮಾರ್ಗ ಇಲ್ಲ ಎಂಬುದನ್ನು ಪತ್ತೆ ಹೆಚ್ಚಿ 15 ದಿನದಲ್ಲಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.
ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರದುರ್ಗದಲ್ಲಿಯೇ 6-7 ಜನ ಅಸುನೀಗಿ¨ªಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ. ಮಳೆ ಕೊರತೆಯಿಂದ ಕುಡಿಯುವ ನೀರಿಗೂ ತತ್ವಾರ ಬರುವ ಮುನ್ಸೂಚನೆಗಳಿದ್ದು, ಇಂತಹ ಸಂದರ್ಭದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಗಳು ಹೆಚ್ಚಾದರೆ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ. ಹೀಗಾಗಿ ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ. ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ನಗರಸಭೆಗಳ ಆಯುಕ್ತರ ಮೇಲೆ ಕೂಡ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಇಲಾಖೆಗಳ ನಡುವೆ ಸಮನ್ವಯ ಅಗತ್ಯ
ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಹಾಸ್ಟೆಲ್‌ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ. ನೀರಿನ ಸ್ವತ್ಛತೆ ಬಗ್ಗೆ ಆದ್ಯತೆ ವಹಿಸಿ, ಸ್ವತ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಿಎಂ ಸೂಚಿಸಿದರು.
Related Articles
Advertisement
ಸಾಮಾನ್ಯವಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ರಸ್ತೆ ಇನ್ನಿತರ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತದೆ. ನೈರ್ಮಲ್ಯ ಮತ್ತು ಸ್ವತ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು.– ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ ರಾಜ್ಯದ 39 ತಾಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ