Advertisement
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯದಲ್ಲಿ ಟಿಕೆಟ್ ಹಂಚಿಕೆ ಕುರಿತು ಈಚೆಗೆ ಮೊದಲ ಹಂತದ ಸಭೆಯೊಂದು ನಡೆದಿದ್ದು, ಇಲ್ಲಿ ಶಾಸಕರ ಕಾರ್ಯನಿರ್ವಹಣೆ ಕುರಿತು ಗಂಭೀರ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
Related Articles
ಬಿಜೆಪಿ ಮೂಲಗಳ ಪ್ರಕಾರ ಪ್ರತಿ ತಿಂಗಳೂ ಅಮಿತ್ ಶಾ ರಾಜ್ಯದ ಬೆಳವಣಿಗೆಗೆ ಸಂಬಂಧಪಟ್ಟಂತೆ ವರದಿ ತರಿಸಿಕೊಳ್ಳುತ್ತಿದ್ದಾರೆ. ಎಲ್ಲ ವಿಧಾನಸಭಾ ಕ್ಷೇತ್ರದ ಬಗ್ಗೆಯೂ ಅವರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದರ ಆಧಾರದ ಮೇಲೆ ಶಾಸಕರಿಗೆ ವಿರೋಧಿ ಅಲೆ ಇರುವುದು ದೃಢಪಟ್ಟಿದೆ. ಜತೆಗೆ ವಿಭಾಗೀಯ ಪ್ರಮುಖರಿಂದ ಪ್ರತ್ಯೇಕ ವರದಿ ಸಂಗ್ರಹಕ್ಕೂ ಪಕ್ಷ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
Advertisement
ಮೂರು ಹಂತದಲ್ಲಿ ಟಿಕೆಟ್ಈ ಬಾರಿಯೂ ಬಿಜೆಪಿ ಒಂದೇ ಹಂತದಲ್ಲಿ ಟಿಕೆಟ್ ಹಂಚಿಕೆ ಮಾಡುವ ಸಾಧ್ಯತೆ ಕಡಿಮೆ ಇದೆ. ಕ್ಷೇತ್ರಗಳನ್ನು ಎ,ಬಿ,ಸಿ ಎಂದು ಮೂರು ರೀತಿಯಲ್ಲಿ ವರ್ಗೀಕರಿಸಿ ಅದರ ಆಧಾರದ ಮೇಲೆ ಸಂಸದೀಯ ಮಂಡಳಿ ಸಭೆಯಲ್ಲಿ ಹೆಸರು ಅಂತಿಮಗೊಂಡ ನಂತರವೇ ಬಿಡುಗಡೆಯಾಗಲಿದೆ. ನಾನು ಬಿಜೆಪಿ ಬಿಡಲ್ಲ: ಸೋಮಣ್ಣ
“ನಾನು ಬಿಜೆಪಿ ಬಿಡುವುದಿಲ್ಲ. ಬಿಜೆಪಿಯಲ್ಲೇ ಇರುತ್ತೇನೆ. ಬಿಜೆಪಿಯಲ್ಲಿ ನನಗೆ ಸಮಾಧಾನವಿದೆ. ಬಿಜೆಪಿಯ ಯಾವ ನಾಯಕರು ನನ್ನ ಗೌರವಕ್ಕೆ ಧಕ್ಕೆ ತಂದಿಲ್ಲ ‘ ಎಂದು ವಸತಿ ಸಚಿವ ವಿ. ಸೋಮಣ್ಣ ಭಾವುಕ ಮಾತುಗಳೊಂದಿಗೆ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಂದು ಅನೇಕ ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗೆ ಅಂತಿಮ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಬೆಂಗಳೂರಿಗೆ ಬಂದ ಆರಂಭದ ದಿನಗಳಲ್ಲಿ ಪಿಗ್ಮಿ ಸಂಗ್ರಹಿಸುತ್ತಿದ್ದೆ. ಈಗ ವಾಪಸ್ ಪಿಗ್ನಿ ಸಂಗ್ರಹಿಸಲು ಕೂಡ ಸಿದ್ಧ. ಆದರೆ ಅಲ್ಲಿಂದ, ಇಲ್ಲಿಗೆ ಚಿತಾವಣೆ ಮಾಡುವ ಕೆಲಸ ಮಾಡಿಲ್ಲ ಎಂದರು. ಸಚಿವ ಸೋಮಣ್ಣ ಸೇರಿದಂತೆ ಪಕ್ಷದ ಯಾವುದೇ ಮುಖಂಡರು ಪಕ್ಷ ಬಿಟ್ಟು ಹೋಗುವುದಿಲ್ಲ. ಈ ಬಗ್ಗೆ ಎದ್ದಿರುವ ಸುದ್ದಿಗಳಿಗೆ ಮಹತ್ವ ಇಲ್ಲ.
-ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ