ಪಣಜಿ: ದಕ್ಷಿಣ ಗೋವಾ ಸಂಸದ ಫ್ರಾನ್ಸಿಸ್ ಸರ್ದಿನ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಾಮನಿರ್ದೇಶನ ಮಾಡಿದರೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಪಕ್ಷ ನನಗೆ ಟಿಕೆಟ್ ನೀಡಿದರೆ, ನಾನು ಖಂಡಿತವಾಗಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸರ್ದಿನ್ ಹೇಳಿದ್ದಾರೆ. ನಾನು ಚುನಾವಣೆಗೆ ಸ್ಪರ್ಧಿಸಬೇಕೆಂದು ಪಕ್ಷದ ಹಲವು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಲಿದೆ, ಮುಂದೆ ನಾನು ಚುನಾವಣೆಯಲ್ಲಿ ಸ್ಫರ್ಧಿಸುವುದಿಲ್ಲ ಎಂದು ಸಂಸದ ಹೇಳಿದ್ದಾರೆ.
ಗೋವಾದಲ್ಲಿ ಉತ್ತರ ಗೋವಾ ಮತ್ತು ದಕ್ಷಿಣ ಗೋವಾ ಎಂಬ ಎರಡು ಲೋಕಸಭಾ ಕ್ಷೇತ್ರಗಳಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಗೋವಾದಿಂದ ಬಿಜೆಪಿಯ ಶ್ರೀಪಾದ್ ನಾಯ್ಕ್ ಗೆದ್ದಿದ್ದರೆ, ದಕ್ಷಿಣ ಗೋವಾದಿಂದ ಕಾಂಗ್ರೆಸ್‍ನ ಫ್ರಾನ್ಸಿಸ್ ಸರ್ದಿನ್ ಗೆದ್ದಿದ್ದರು. ಕಳೆದ ಕೆಲವು ದಿನಗಳಿಂದ, ದಕ್ಷಿಣ ಗೋವಾದಲ್ಲಿಯೂ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ತಂತ್ರ ರೂಪಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪೊಂಡಾದಲ್ಲಿ ರ್ಯಾಲಿ ನಡೆಸಿ ಲೋಕಸಭೆ ಚುನಾವಣೆಯ ರಣಕಹಳೆ ಮೊಳಗಿಸಿದ್ದಾರೆ.