Advertisement

Election: ಚುನಾವಣೆಯಲ್ಲಿ ಸ್ಪರ್ಧಿಸುವೆ: ಉಮಾ ಭಾರತಿ

09:52 PM Sep 13, 2023 | Team Udayavani |

ಭೋಪಾಲ: “ನಾನು ರಾಜಕೀಯದಿಂದ ದೂರವಾಗಿಲ್ಲ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ’ ಹೀಗೆಂದು ಹೇಳಿದ್ದು ಮಧ್ಯಪ್ರದೇಶದ ಮಾಜಿ ಸಿಎಂ ಉಮಾ ಭಾರತಿ. ಸಾಗರ್‌ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೀರ್ಘ‌ ಸಮಯದಿಂದ ಕೆಲಸ ಮಾಡುತ್ತಿದ್ದ ಕಾರಣ ಕಳೆದ ಬಾರಿ ಸ್ಪರ್ಧಿಸಲು ನಿರಾಕರಿಸಿದ್ದೆ.

Advertisement

ಜನರು ಕೂಡ ನಾನು ರಾಜಕೀಯದಿಂದ ನಿವೃತ್ತಿಯಾಗಿದ್ದೇನೆ ಎಂದು ಭಾವಿಸಿದ್ದಾರೆ’ ಎಂದರು. ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ಹೇಳಿದ್ದಾರೆ. ಇತ್ತೀಚೆಗಷ್ಟೇ ಅವರು ಪಕ್ಷದ ಆಶೀರ್ವಾದ ಯಾತ್ರೆಗೆ ತಮ್ಮನ್ನು ಆಹ್ವಾನಿಸದ್ದಾಗಿ ಅತೃಪ್ತಿ ವ್ಯಕ್ತಪಡಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next