Advertisement

ದಾವಣಗೆರೆಯಿಂದ ಲೋಕಸಭೆಗೆ ಯುಪಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಮಹಿಮಾ ಜೆ.ಪಟೇಲ್

01:22 PM Feb 09, 2023 | Team Udayavani |

ದಾವಣಗೆರೆ: ಮುಂಬರುವ 2024ರ ವೇಳೆಗೆ ದೇಶದ ರಾಜಕಾರಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಆಗಲಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಯುಪಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಜೆಡಿಯು ರಾಜಾಧ್ಯಕ್ಷ ಮಹಿಮಾ ಜೆ.ಪಟೇಲ್ ತಿಳಿಸಿದರು.

Advertisement

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2024ರ ವೇಳೆಗೆ ಬಿಜೆಪಿ ಪಕ್ಷ ಹೊರತು ಪಡಿಸಿ ಉಳಿದೆಲ್ಲಾ ಪಕ್ಷಗಳು ಒಂದಾಗಲಿವೆ. ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಒಂದೇ ವೇದಿಕೆ ಅಡಿಯಲ್ಲಿ ಬರಲಿವೆ. ಆಗ ನಾನು ಸಂಸತ್ ಚುನಾವಣೆಗೆ ಸ್ಪರ್ಧಿಸುವೆ. ಬದಲಾದ ಸನ್ನಿವೇಶದಲ್ಲಿ ನಾನು ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡಲು ಬಯಸುತ್ತೇನೆ ಎಂದು ಹೇಳಿದರು.

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ನಾನು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ. ಅದರೂ, ರಾಜ್ಯದ ವಿಧಾನ ಸಭಾ ಕ್ಷೇತ್ರದ ಎಲ್ಲಾ 224 ಕ್ಷೇತ್ರಗಳಿಂದ ಸಂಯುಕ್ತ ಜನತಾ ದಳದ ಅಭ್ಯರ್ಥಿಗಳು ಸ್ಪರ್ದೆ ಮಾಡಲಿದ್ದಾರೆ. ಈಗಾಗಲೇ ಜೆಡಿಯು ಪಕ್ಷದಿಂದ ಆಬ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದ್ಯಕ್ಕೆ 3 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದು ಉಳಿದ 50 ರಿಂದ 100 ಕಡೆಗಳಲ್ಲಿ ಜೆಡಿಯು ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಉಳಿದ ಕಡೆಗಳಲ್ಲಿಯೂ ಅಭ್ಯರ್ಥಿಗಳನ್ನು ಕೆಲವು ಮಾನದಂಡ ಆಧಾರದಲ್ಲಿ ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಫೆ: 11: ಹನುಮಗಿರಿ ಕ್ಷೇತ್ರದಲ್ಲಿ ಹುತಾತ್ಮ ಯೋಧರ ಅಮರಗಿರಿ ಅಮರಜ್ಯೋತಿ ಮಂದಿರ ಲೋಕಾರ್ಪಣೆ

ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸುವ ಅಭ್ಯರ್ಥಿಗಳ ಹಿನ್ನೆಲೆ, ಜೀವನ ಶೈಲಿ, ಸಮಾಜ ಸೇವೆ, ಅಪರಾಧ ಹಿನ್ನೆಲೆ ಗುರುತಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next