ಬೆಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಇತ್ತು. ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ.
ಉತ್ತರ ಒಳನಾಡಿನ ಕೆಲವೆಡೆ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ತಾಪಮಾನದಲ್ಲಿ ಕೊಂಚ ಹೆಚ್ಚಳವಾದರೆ, ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿತ್ತು. ದಾವಣಗೆರೆಯಲ್ಲಿ ರಾಜ್ಯದಲ್ಲಿಯೇ ಕನಿಷ್ಠ 14.8 ಡಿ.ಸೆ.ತಾಪಮಾನ ದಾಖಲಾಯಿತು. ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
Advertisement