Advertisement
ವಿಧಾನಸೌಧದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಭೆಯಲ್ಲಿ, ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ.
Related Articles
Advertisement
ಯುದ್ಧ ಬೇಗ ಕೊನೆಯಾಗಲಿ ಎಂಬುದೇ ಎಲ್ಲರ ಆಶಯ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಮನಸ್ಥಿತಿ ಹೇಗಿರಲಿದೆ ಎಂದು ಗಮನಿಸಿ ಕಾನೂನಿನ ಚೌಕಟ್ಟಿನೊಳಗೆ ಕ್ರಮ ವಹಿಸಿ ಅವರ ಉತ್ತಮ ಭವಿಷ್ಯಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದರು.
ವಿದ್ಯಾರ್ಥಿಗಳು ಸುರಕ್ಷಿತವಾಗಿ ಹಿಂದಿಗಿರುವುದೇ ದೊಡ್ಡ ಭಾಗ್ಯ. ಪ್ರಧಾನಿ ನರೇಂದ್ರ ಮೋದಿಯವರು ಈ ವಿಚಾರದಲ್ಲಿ ಹೆಚ್ಚು ಆಸಕ್ತಿ ವಹಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲವಾಗಿ ಬೆಳಗಬೇಕಿದೆ. ಎಲ್ಲರೂ ಉತ್ತಮ ಮನೋಸ್ಥೈರ್ಯದಿಂದ ಇರಬೇಕು. ವಿದ್ಯಾರ್ಥಿಗಳಿಗೂ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಇತ್ತು. ಈಗ ಸರ್ಕಾರ ಮಾಡಿರುವ ತೀರ್ಮಾನಕ್ಕೆ ವಿದ್ಯಾರ್ಥಿಗಳು ಕೂಡ ಒಪ್ಪಿದ್ದಾರೆ. ವೈದ್ಯಕೀಯ ಶಿಕ್ಷಣದಲ್ಲಿ ಮಾರ್ಪಾಡು ತರುವ ಬಗ್ಗೆ ವಿದ್ಯಾರ್ಥಿಗಳು ಸಲಹೆ ನೀಡಿದ್ದಾರೆ. ಈ ಬಗ್ಗೆಯೂ ಸಮಿತಿಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದರು.
ಶುಲ್ಕ ಇಲ್ಲ
ಸದ್ಯಕ್ಕೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುತ್ತಿಲ್ಲ. ಆದರೆ ಅವರ ಕಲಿಕೆ, ತರಬೇತಿಯನ್ನು ಇಲ್ಲಿ ಮುಂದುವರಿಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಉಚಿತವಾಗಿಯೇ ಶಿಕ್ಷಣ ಮುಂದುವರಿಸಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ಸಮಿತಿಯಿಂದ ಕೇಂದ್ರ ಸರ್ಕಾರಕ್ಕೆ ಎಲ್ಲ ಬಗೆಯ ಮನವಿಗಳನ್ನು ಸಲ್ಲಿಸಲಾಗುವುದು. ಈ ವಿಚಾರದಲ್ಲಿ ಕೇಂದ್ರ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ ಎಂದರು.