Advertisement

ನಿಗದಿತ ಲಾಕ್‌ಡೌನ್‌ ಮುಂದುವರಿಕೆ: ಸಭೆಯಲ್ಲಿ ತೀರ್ಮಾನ

08:33 AM Jul 26, 2020 | Suhan S |

ಅರಸೀಕೆರೆ: ಕೋವಿಡ್‌ ಸೋಕು ತಾಲೂಕಿನಲ್ಲಿ ತನ್ನ ಕರಾಳ ಛಾಯೆ ಹರಡುತ್ತಿರುವುದನ್ನು ಹಿಮ್ಮೆಟ್ಟಿಸಲು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಹಿಂದಿನಂತೆ ತಮ್ಮ ವ್ಯಾಪಾರಗಳನ್ನು ನಡೆಸುವುದನ್ನು ಮುಂದುವರಿಸುವಂತೆ ಶಾಸಕ ಕೆ.ಎಂ. ಶಿವಲಿಂಗೇಗೌಡರ ನೇತೃತ್ವದಲ್ಲಿ ನಡೆದ ಟಾಸ್ಕ್ಪೊರ್ಸ್‌ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

Advertisement

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋರ್ಸ್‌ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವೈದ್ಯರು ತಾಲೂಕು ಆಡಳಿತ ಕೋವಿಡ್ ನಿಯಂತ್ರಿಸಲು ಹಗಲಿರುಳು ಶ್ರಮಿಸುತ್ತಿದ್ದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕಟ್ಟುನಿಟ್ಟಿನ ಲಾಕ್‌ಡೌನ್‌ ಪಾಲಿಸಬೇಕೆಂದು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.

ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿರುವ ವ್ಯಕ್ತಿಗಳಿಂದಲೇ ಸೋಂಕು ಹೆಚ್ಚಾಗಿ ಹರಡುತ್ತಿರುವುದು ಕಂಡು ಬರುತ್ತಿರುವುದರಿಂದ ಅವರನ್ನು ಕಡ್ಡಾಯ ಕ್ವಾರಂಟೈನ್‌ ಮಾಡುವ ಅಗತ್ಯವಿದೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ನೌಕರರಾಗಿ ಅಡುಗೆ ಕೆಲಸ ನಿರ್ವಹಿಸುತ್ತಿರುವವರನ್ನು ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಿ ಹಾಸ್ಟೆಲ್‌ಗ‌ಳ ಕ್ವಾರಂಟೈನ್‌ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲು ಸೂಚನೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲಪ್ಪ ಅವರಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next