Advertisement

ನೀರಿಗಾಗಿ ಮುಂದುವರಿದ ಮಂಡ್ಯ ರೈತರ ಪ್ರತಿಭಟನೆ

12:08 AM Jun 27, 2019 | Lakshmi GovindaRaj |

ಶ್ರೀರಂಗಪಟ್ಟಣ: ಜಿಲ್ಲೆಯ ನಾಲೆಗಳಿಗೆ ಕೂಡಲೇ ನೀರು ಹರಿಸಬೇಕು ಹಾಗೂ ಮೈಷುಗರ್‌ ಸಕ್ಕರೆ ಕಾರ್ಖಾನೆ ಪುನಾರಂಭಿಸಬೇಕು ಎಂದು ಆಗ್ರಹಿಸಿ ಜು.6ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಸಮಾಜ ಸೇವಕ ಡಾ.ರವೀಂದ್ರ ತಿಳಿಸಿದರು.

Advertisement

ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತರ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮುಂಗಾರು ತಡವಾಗಿದ್ದು, ಬರಗಾಲ ಎದುರಿಸುತ್ತಿರುವ ಪರಿಸ್ಥಿತಿಯಲ್ಲಿ ಒಂದು ಕಟ್ಟು ನೀರು ಹರಿಸಿದರೆ ಬೆಳೆಗಳು ಕೊಯ್ಲಿಗೆ ಬರುತ್ತವೆ. ಇಂತಹ ಸಮಯದಲ್ಲಿ ನಾಲೆಗಳಿಗೆ ನೀರು ಹರಿಸದೆ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ.

ಜೂನ್‌ ತಿಂಗಳಲ್ಲೇ ಕಾರ್ಖಾನೆಗಳನ್ನು ಆರಂಭಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಜೂನ್‌ ಮುಗಿಯುತ್ತಿದ್ದರೂ ಕಾರ್ಖಾನೆಗಳು ಮಾತ್ರ ಪುನಾರಂಭಿಸಿಲ್ಲ. ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಬೇಡಿಕೆಗಳ ಈಡೇರಿಕೆಗೆ ಮನವಿ ಪತ್ರ ಸಲ್ಲಿಸಿ, ಜು.5ರವರೆಗೆ ಅವರ ಉತ್ತರಕ್ಕೆ ಕಾದು ನೋಡುತ್ತೇವೆ. ಬಳಿಕ ಜು.6ರಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ ಎಂದು ಎಚ್ಚರಿಸಿದರು.

ಇದೇ ವೇಳೆ, ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಸಂಘದ ಕಾರ್ಯಕರ್ತರು ಮದ್ದೂರು ತಾಲೂಕಿನ ಕೊಪ್ಪ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆ ಜಾನುವಾರು ಸಮೇತ ಆಗಮಿಸಿ ವಿನೂತನ ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next