Advertisement

ಮುಂದುವರಿದ ಪ್ರತಿಭಟನೆ

07:53 AM Nov 15, 2017 | Team Udayavani |

ಬೆಳಗಾವಿ: ಅಧಿವೇಶನದ ಎರಡನೇ ದಿನವಾದ ಮಂಗಳವಾರವೂ ಸುವರ್ಣ ಸೌಧದೆದುರು ಪ್ರತಿಭಟನೆಗಳು ನಡೆದವು. ಕೊಂಡಸಕೊಪ್ಪ ಗ್ರಾಮದ ಬಳಿ ನಿರ್ಮಿಸಿದ ವೇದಿಕೆಯಲ್ಲಿ ಶಾಸಕ ಕೆ.ಎಸ್‌.ಪುಟ್ಟಣ್ಣಯ್ಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರಕಾರದ ಗಮನ ಸೆಳೆದರು. 

Advertisement

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ,  ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ ಕೇಂದ್ರ ಸರಕಾರದಿಂದ ಖರೀದಿ ಮಾಡಬೇಕು ಎಂದು ಆಗ್ರಹಿಸಿ ನ.15 ರಂದು ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಶಾಸಕ ಕೆ.ಎಸ್‌.ಪುಟ್ಟಣ್ಣಯ್ಯ ಮಾತನಾಡಿದರು. ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕೆ.ಟಿ.ಗಂಗಾಧರ, ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ಕಲ್ಯಾಣರಾವ್‌ ಮುಚಳಂಬಿ, ಜಿಲ್ಲಾಧ್ಯಕ್ಷ ಈರಣ್ಣ ಪಾಟೀಲ ಮೊದಲಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next