Advertisement
ಇದಕ್ಕೂ ಮುನ್ನ ಬೃಹತ್ ಮೆರವಣಿಗೆ ನಡೆಸಲಾಯಿತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿಗೆ ಇರುವ ಎಸ್.ಟಿ. ಮೀಸಲಾತಿ ಹೋರಾಟ ಸಮಿತಿಯಿಂದ ಆರಂಭಿಸಿರುವ ಆಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಯುವ ಮುಖಂಡ ಬಿ.ಆರ್.ಎಲ್. ಶ್ರೀನಿವಾಸ್ ಮತ್ತು ಗಡ್ಡಂ ತಿಮ್ಮಪ್ಪ ಅವರು ಉಪವಾಸ ಕೂತಿದ್ದಾರೆ. ಅವರ ಆರೋಗ್ಯದ ಸ್ಥಿತಿ ಏರುಪೇರು ಆಗಬಹುದೆಂದು ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಡಿಎಚ್‌ಒ ಮೊದಲಾದವರು ಬಂದು ಸತ್ಯಾಗ್ರಹ ಕೈ ಬಿಡುವಂತೆ ಮನವಿ ಮಾಡಿದರೂ ಅದಕ್ಕೆ ಒಪ್ಪಲಿಲ್ಲ. ಜೊತೆಗೆ ಸತ್ಯಾಗ್ರಹಿಗಳು ತಮಗೆ ಡ್ರಿಪ್ ಹಾಕುವುದಕ್ಕೂ ಒಪ್ಪಲಿಲ್ಲ. ಎಸ್ಟಿ ಸಮುದಾಯದ ಮುಖಂಡರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೂಡಲೇ ಈ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದರು. ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಕಳೆದ 3 ದಶಕಗಳಿಂದ ಮನವಿ ಮಾಡುತ್ತಾ ಬಂದಿದೆ, ಬೇಡಿಕೆ ಈಡೇರಿಲ್ಲ. ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ರಚನೆ ಮಾಡಿದ್ದ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಆಯೋಗ ನೀಡಿರುವ ವರದಿಯನ್ನು ಬಹಿರಂಗಪಡಿಸಿ ಅಂಗೀಕರಿಸಬೇಕು ಎಂದು ಒತ್ತಾಯಿಸಲಾಯಿತು. ಎಸ್‌ಟಿ ಮೀಸಲಾತಿ ಹೆಚ್ಚಿಸುವಂತೆ ಸಮುದಾಯ ಸ್ವಾಮೀಜಿ ಪಾದಯಾತ್ರೆ ನಡೆಸಿದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಸ್ವಾಮೀಜಿಗಳನ್ನು ನಿರ್ಲಕ್ಷé ಮಾಡಿರುವ ರಾಜ್ಯ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಮಾತನಾಡುವ ಜನಪ್ರತಿನಿಧಿಗಳಾದರೂ ಬಿಸಿ ಮುಟ್ಟಿಸಬೇಕು ಎಂದು ಸತ್ಯಾ ಗ್ರಹಿಗಳಾದ ಬಿ.ಆರ್.ಎಲ್. ಶ್ರೀನಿವಾಸ್ ಮನವಿ ಮಾಡಿದರು. ಮೀನಳ್ಳಿ ತಾಯಣ್ಣ, ಯುವ ಮುಖಂಡರಾದ ಜಗನ್ನಾಥ್, ವಿ.ಕೆ. ಬಸಪ್ಪ, ಮೋಕಾ ಮಲ್ಲಯ್ಯ, ವಿ.ಎಸ್. ಶಿವಶಂಕರ್ ಸೇರಿದಂತೆ ಸಮುದಾಯದ ನೂರಾರು ಜನರು ಇದ್ದರು. Advertisement
ಡಿಸಿ ಕಚೇರಿ ಎದುರು 3ನೇ ದಿನ ಮುಂದುವರಿದ ಸತ್ಯಾಗ್ರಹ
08:30 PM Oct 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.