Advertisement

ಗ್ರಾಮೀಣ ಅಂಚೆ ಸೇವಕರ ಮುಷ್ಕರ ಮುಂದುವರಿಕೆ

07:30 AM May 25, 2018 | Team Udayavani |

ಬೆಂಗಳೂರು: ಏಳನೇ ವೇತನ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಅಖೀಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ನೇತೃತ್ವದಲ್ಲಿ ಗ್ರಾಮೀಣ ಅಂಚೆ ಸೇವಕರು ನಡೆಸುತ್ತಿರುವ ಅರ್ನಿದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

Advertisement

ರಾಜ್ಯದ ಹಲವೆಡೆ ಮುಷ್ಕರ ನಡೆಸುತ್ತಿರುವ ಅಂಚೆ ಸೇವಕರು, ಬೇಡಿಕೆ ಈಡೇರಿಕೆಗೆ ಒತ್ತಾಯಿಸುತ್ತಿದ್ದಾರೆ. ಗ್ರಾಮೀಣ ಅಂಚೆ ಇಲಾಖೆ ನೌಕರರಿಗೆ 7ನೇ ವೇತನ ಆಯೋಗದ ಸವಲತ್ತು ದೊರೆತು 20 ತಿಂಗಳಾದರೂ ಇಲಾಖೆಗೆ ಬೆನ್ನಲುಬಾಗಿರುವ ಅಂಚೆ ಸೇವಕರಿಗೆ ಸೂಕ್ತ ವೇತನ ಮತ್ತು ಸೇವಾ ಸವಲತ್ತುಗಳನ್ನು ನೀಡದೆ ಅನ್ಯಾಯ ಮಾಡಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರ ಕಮಲೇಶ್ಚಂದ್ರ ನೇತೃತ್ವದ ಸಮಿತಿ ಸಲ್ಲಿಸಿದ 7ನೇ ವೇತನ ಆಯೋಗದ ವರದಿ ಜಾರಿಗೊಳಿಸದೆ ತಾರತಮ್ಯ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಅಂಚೆ ಇಲಾಖೆಯಲ್ಲಿ ಅಂದಾಜು 2.60 ಲಕ್ಷಕ್ಕೂ ಹೆಚ್ಚು ಜಿಡಿಎಸ್‌ ನೌಕರರು 40 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರೂ ಅವರಿಗೆ ಯಾವುದೇ ಸವಲತ್ತುಗಳನ್ನು ನೀಡಲಾಗುತ್ತಿಲ್ಲ. ಇಲಾಖೆ ನೌಕರರ ಸಮಸ್ಯೆಯನ್ನು ಬಗೆಹರಿಸುವಂತೆ ಹಲವು ಬಾರಿ ಪ್ರಧಾನಮಂತ್ರಿ, ದೂರ ಸಂಪರ್ಕ ಸಚಿವರು, ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಇದೀಗ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಹೋರಾಟ ನಡೆಸುತ್ತಿದ್ದು, ಈ ಬೇಡಿಕೆ ಈಡೇರುವವರೆಗೂ ನಿರಂತರವಾಗಿ ನಮ್ಮ ಹೋರಾಟ ನಡೆಯಲಿದೆ. ಬೇಡಿಕೆ ಈಡೇರಿಕೆಗಾಗಿ ಕಳೆದ ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರೂ, ಯಾವುದೇ ಜನಪ್ರತಿನಿಧಿಗಳು ಸಮಸ್ಯೆ ಆಲಿಸಿಲ್ಲ ಎಂದು ವಿಷಾದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next