Advertisement
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯಾವುದೇ ವ್ಯಾಪಾರ ಸಂಸ್ಥೆಗಳಲ್ಲಿ, ಮನೆಗಳಲ್ಲಿ 14 ವರ್ಷದೊಳಗಿನ ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಾಲಕಾರ್ಮಿಕರನ್ನು ರಕ್ಷಿಸಲು ಅಧಿಕಾರಿಗಳು ನಿರಂತರ ಕಾರ್ಯಾಚರಣೆಗಳನ್ನು ನಡೆಸಬೇಕೆಂದು ನಿರ್ದೇಶನ ನೀಡಿದರು.
Related Articles
Advertisement
ಕಾರ್ಯಾಗಾರ ನಡೆಸಿ: ಎಂಎಸ್‌ಒಪಿಎಸ್ ಅನುದಾನದಲ್ಲೂ ಜಿಲ್ಲಾದ್ಯಂತ ಬಾಲ ಕಾರ್ಮಿಕ ತಡೆ ಕುರಿತು ಗ್ರಾಮಲೆಕ್ಕಿಗರಿಗೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ, ಕಂದಾಯ ಇಲಾಖಾಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರ ನಡೆಸಬೇಕು. ಕೊಳಚೆ ಪ್ರದೇಶಗಳಲ್ಲಿ, ಗ್ರಾಮೀಣ ಪ್ರದೇಶಗಳಲ್ಲಿ ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲು, ಗೋಡೆ ಬರಹಗಳ ಮೂಲಕ ಬಾಲ ಕಾರ್ಮಿಕ ಪದ್ಧತಿ ತಡೆ ಕುರಿತು ಮಾಹಿತಿ ನೀಡುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಳಸಬೇಕು.
ಬಾಲ ಕಾರ್ಮಿಕರಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸುವಂತೆ ಕಾರ್ಮಿಕ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಎಚ್. ರಾಮಕೃಷ್ಣ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಬಿ.ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಕೆ.ಜಿ.ದಿಲೀಪ್, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.