Advertisement
ಮಂಗಳವಾರ ಸಂಜೆ ಮಳೆಯ ನಡುವೆಯೂ ಶಿಕ್ಷಕರು ಪ್ರತಿಭಟನೆ ನಡೆಸಿದ್ದು, ಸರ್ಕಾರದಿಂದ ಸೂಕ್ತ ಉತ್ತರ ಬರುವವರೆಗೂ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು. 1987ರಿಂದ 1994-95ರ ಅವಧಿಯಲ್ಲಿ ಆರಂಭವಾಗಿರುವ ಸಾವಿರಾರು ಶಾಲೆಗಳಿಗೆ ಸರ್ಕಾರ ವೇತನಾನುದಾನ ನೀಡಿದೆ. ಇದೇ ಅವಧಿಯಲ್ಲಿ ಆರಂಭವಾದ ಸುಮಾರು 87 ಶಾಲೆಗಳನ್ನು ಸರ್ಕಾರ ವೇತನಾನುದಾನಕ್ಕೆ ಒಳಪಡಿಸಿಲ್ಲ.
ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೂ, ಸರ್ಕಾರ ದಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದು ರಾಜ್ಯ ಅನುದಾನಕ್ಕೆ ಒಳಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ವರದರಾಜ್ ಹೇಳಿದರು.