Advertisement
ಸರಕಾರಿ ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಜಿಲ್ಲೆಯ ವಿವಿಧ ಬಸ್ಸು ಮಾಲಕರ ಸಂಘದವರಲ್ಲಿ ವಿಚಾರಿಸಿದಾಗ ಸದ್ಯಕ್ಕೆ ದರ ಏರಿಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಮಾಡುವುದು ಅನಿವಾರ್ಯವಾದೀತು ಎಂದು ತಿಳಿಸಿದ್ದರು.
Related Articles
Advertisement
ಕೇರಳದ ಬಸ್ಗಳಲ್ಲೂ ದರ ಏರಿಕೆಕರ್ನಾಟಕಕ್ಕೆ ಕೇರಳ ರಾಜ್ಯ ಸಾರಿಗೆ ಬಸ್ (ಕೆಎಸ್ಸಾರ್ಟಿಸಿ) ಸೇವೆಗಳ ಟಿಕೆಟ್ ದರವನ್ನೂ ಜ. 7ರಿಂದ ಹೆಚ್ಚಿಸಲಾಗಿದೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಟಿಕೆಟ್ ದರವನ್ನು ಹೆಚ್ಚಿಸಿದ ಹಿನ್ನೆಲೆಯಲ್ಲಿ ಕೇರಳವೂ ಟಿಕೆಟ್ ದರ ಹೆಚ್ಚಳಗೊಳಿಸಿದೆ. ಅಂತಾರಾಜ್ಯ ಒಪ್ಪಂದದ ಪ್ರಕಾರ ಎರಡು ರಾಜ್ಯಗಳ ನಡುವೆ ಟಿಕೆಟ್ ದರ ಏಕರೂಪವಾಗಿರಬೇಕೆಂದು ಈ ಹಿಂದೆ ತೀರ್ಮಾನಿಸಲಾಗಿದ್ದು, ಆ ಹಿನ್ನೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ಕಾಸರಗೋಡು-ಮಂಗಳೂರು ಟಿಕೆಟ್ ದರ 74 ರೂ.ಯಿಂದ 81 ರೂ.ಗೇರಿದೆ. ಪುತ್ತೂರಿಗೆ 74 ರೂ. ಇದ್ದುದು 85 ರೂ., ಸುಳ್ಯಕ್ಕೆ 73 ರೂ. ಇದ್ದುದು 80 ರೂ.ಗೆ ಏರಿಕೆಯಾಗಿದೆ.