Advertisement

ನಾಳೆಯಿಂದ ಗುತ್ತಿಗೆ ಕಾರ್ಮಿಕರ ಮುಷ್ಕರ: ನೀರು ಸರಬರಾಜು, ಸ್ವಚ್ಛತೆ ಸೇವೆ ವ್ಯತ್ಯಯ ಸಾಧ್ಯತೆ

07:50 AM Jan 31, 2023 | Team Udayavani |

ಮಂಗಳೂರು: ನಗರದ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಕಸ ಸಾಗಿಸುವ ವಾಹನಗಳ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್‌, ಕ್ಲೀನರ್ಸ್‌, ಹೆಲ್ಪರ್, ಒಳಚರಂಡಿ ಕಾರ್ಮಿಕರು ಫೆ. 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

Advertisement

ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಹೊರಗುತ್ತಿಗೆ ನೌಕರರ ಸಂಘದ ಕರಾವಳಿ ವಿಭಾಗದ ಸಂಚಾಲಕ ಬಿ.ಕೆ. ಅಣ್ಣಪ್ಪ ಕಾರೆಕ್ಕಾಡು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ 15 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ಕಾರ್ಮಿಕರಿದ್ದಾರೆ. ರಾಜ್ಯದ 330 ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರೂ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ. 1ರಿಂದ ಕುಡಿಯುವ ನೀರು ಸರಬರಾಜು ಮತ್ತು ಸ್ವತ್ಛತೆ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು. ಜಿಲ್ಲೆಯಲ್ಲಿಯೂ ಸುಮಾರು 900ಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಮಂಗಳೂರಿನಲ್ಲಿ ಜಾಥಾ ಹಾಗೂ ಧರಣಿ ನಡೆಸಲಾಗುವುದು ಎಂದರು.

ಪೌರ ಕಾರ್ಮಿಕರ ನೇರ ನೇಮಕಾತಿ ಮಾಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಹೊರ ಗುತ್ತಿಗೆ ನೌಕರರ ನ್ಯಾಯಬದ್ಧ ಹಕ್ಕಿಗಾಗಿ ನಾವು ಆಗ್ರಹಿಸುತ್ತೇವೆ. ಒಂದೇ ಇಲಾಖೆಯಲ್ಲಿ ಕೆಲಸ ಮಾಡುವವರ ಮಧ್ಯೆ ಒಡೆದು ಆಳುವ ನೀತಿ ಸರಿಯಲ್ಲ. ಈ ಲೋಪವನ್ನು ಸರಿಪಡಿಸಿ ಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಒಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು. ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next