Advertisement
ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್ನೋಟ್ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪಟ್ಟು ಹಿಡಿದಿರುವ ಬಿಜೆಪಿ, ಎಕ್ಸ್ ಖಾತೆಯಲ್ಲಿ 5 ಪ್ರಶ್ನೆಗಳನ್ನು ಹಾಕುವ ಮೂಲಕ ಸಚಿವ ಪ್ರಿಯಾಂಕ್ರನ್ನು ತಿವಿದಿದೆ.
Related Articles
Advertisement
ಕಾಮಗಾರಿ ಕೊಡಿಸುವುದಾಗಿ ನಿಮ್ಮ ರಾಜು ಕಪನೂರು ಕಿಕ್ಬ್ಯಾಕ್ ಪಡೆದಿದ್ದ ವಿಚಾರ ನಿಮಗೆ ತಿಳಿದಿಲ್ಲವೇ? ರಾಜು ಕಪನೂರು ತೆಗೆದುಕೊಂಡ ದುಡ್ಡಿನಲ್ಲಿ ನಿಮ್ಮದೆಷ್ಟು ಪಾಲು? ಆಗಸ್ಟ್ನಲ್ಲಿ ಗುತ್ತಿಗೆದಾರ ಸಚಿನ್ ಈ ಬಗ್ಗೆ ಚರ್ಚಿಸಲು ನಿಮ್ಮ ಬಳಿ ಬಂದಾಗ ನೀವು ಹಾಕಿದ ಕಂಡೀಶನ್ ಏನು? ಎಂದು ಪ್ರಶ್ನೆಗಳ ಸುರಿಮಳೆಗರೆದಿದೆ.