Advertisement

Contracter Case: ಸಚಿವ ಪ್ರಿಯಾಂಕ್‌ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶಿಸಲಿ: ಅಶೋಕ್‌

01:42 AM Dec 30, 2024 | Team Udayavani |

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಕಾರಣ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್‌. ಅಶೋಕ್‌, ಊರಿಗೆಲ್ಲ ಉಪದೇಶ ಮಾಡುವ ಪ್ರಿಯಾಂಕ್‌ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಆಗ್ರಹಿಸಿದ್ದಾರೆ.

Advertisement

ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್‌ ಸಂವಿಧಾನ ಅನ್ವಯ ಆಗುವುದಿಲ್ಲವೇ? ಗುತ್ತಿಗೆದಾರ ಸಚಿನ್‌ ಸಾವಿನಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಲಿ. ಸಚಿನ್‌ ಪಾಂಚಾಳ ಅವರು ಡೆತ್‌ನೋಟ್‌ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರು 15 ಲಕ್ಷ ರೂ.ಗೂ ಅಧಿಕ ಹಣ ತೆಗೆದುಕೊಂಡು ಟೆಂಡರ್‌ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ರೂ. ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಿದ್ದಾರೆಂದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ ಎಂದು ಅಶೋಕ್‌ ಹೇಳಿದ್ದಾರೆ.

ಬಿಜೆಪಿಯಿಂದ ಸಚಿವರಿಗೆ 5 ಪ್ರಶ್ನೆ
ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಪಟ್ಟು ಹಿಡಿದಿರುವ ಬಿಜೆಪಿ, ಎಕ್ಸ್‌ ಖಾತೆಯಲ್ಲಿ 5 ಪ್ರಶ್ನೆಗಳನ್ನು ಹಾಕುವ ಮೂಲಕ ಸಚಿವ ಪ್ರಿಯಾಂಕ್‌ರನ್ನು ತಿವಿದಿದೆ.

ಫ್ಯಾಕ್ಟ್‌ ಚೆಕ್‌ ಸಚಿವರಿಗೆ ಪಂಚ ಪ್ರಶ್ನೆಗಳು ಎನ್ನುವ ವಿಶೇಷಣ ಹಾಗೂ ಕಾಂಗ್ರೆಸ್‌ ಲೂಟ್ಸ್‌ ಕರ್ನಾಟಕ, ಕರಪ್ಟ್ ಖರ್ಗೆ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಪೋಸ್ಟ್‌ ಮಾಡಿರುವ ಬಿಜೆಪಿ, ಈ ಪ್ರಶ್ನೆಗಳಿಗೆ ಉತ್ತರಿಸಲು ನಿಮ್ಮಲ್ಲಿ ದಮ್ಮು, ತಾಕತ್ತು ಹಾಗೂ ಅದೇನೋ ಗಟ್ಸ್‌ ಅಂತೀರಲ್ಲ… ಅದು ಇದೆಯೇ? ಎಂದೂ ಪ್ರಶ್ನಿಸಿದೆ.

Advertisement

ಕಾಮಗಾರಿ ಕೊಡಿಸುವುದಾಗಿ ನಿಮ್ಮ ರಾಜು ಕಪನೂರು ಕಿಕ್‌ಬ್ಯಾಕ್‌ ಪಡೆದಿದ್ದ ವಿಚಾರ ನಿಮಗೆ ತಿಳಿದಿಲ್ಲವೇ? ರಾಜು ಕಪನೂರು ತೆಗೆದುಕೊಂಡ ದುಡ್ಡಿನಲ್ಲಿ ನಿಮ್ಮದೆಷ್ಟು ಪಾಲು? ಆಗಸ್ಟ್‌ನಲ್ಲಿ ಗುತ್ತಿಗೆದಾರ ಸಚಿನ್‌ ಈ ಬಗ್ಗೆ ಚರ್ಚಿಸಲು ನಿಮ್ಮ ಬಳಿ ಬಂದಾಗ ನೀವು ಹಾಕಿದ ಕಂಡೀಶನ್‌ ಏನು? ಎಂದು ಪ್ರಶ್ನೆಗಳ ಸುರಿಮಳೆಗರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next