ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿಯವಾರದ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ್ ಆ್ಯಪ್ ಮೆಸೇಜ್ ಕಳುಹಿಸಿ ಸಂತೋಷ್ ನಾಪತ್ತೆಯಾಗಿದ್ದರು.
ಇದನ್ನೂ ಓದಿ:ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ; ಹಿಂದೆ ನಿಂತು ಪ್ರಚೋದನೆ ನೀಡುವವರಿಗೆ ಸಿಎಂ ಎಚ್ಚರಿಕೆ
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರ ಸಂತೋಷ್ ಪತ್ರ ಬರೆದಿದ್ದ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿತ್ತು.