Advertisement

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ತನಿಖೆ ಆರಂಭ

10:02 AM Apr 13, 2022 | Team Udayavani |

ಉಡುಪಿ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ತನಿಖೆ ಆರಂಭಗೊಂಡಿದೆ.

Advertisement

ಈಗಾಗಲೇ ಉಡುಪಿಯಲ್ಲಿ ಮೊಕ್ಕಾಂ ಹೂಡಿರುವ ಮಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯ(ಎಫ್.ಎಸ್.ಎಲ್)ದ ತಂಡವು ಸಂತೋಷ್ ಅವರ ಮೃತದೇಹ ಪತ್ತೆಯಾಗಿರುವ ಲಾಡ್ಜ್ ಗೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಸಂತೋಷ್ ಆತ್ಮಹತ್ಯೆ ಪ್ರಕರಣ: ಉಡುಪಿಯಲ್ಲಿ ಸಚಿವ ಈಶ್ವರಪ್ಪ ವಿರುದ್ದ ಎಫ್ ಐಆರ್ ದಾಖಲು

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಕುಟುಂಬಸ್ಥರು ಆಗಮಿಸಿದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಸಂತೋಷ್ ಪಾಟೀಲ್ ಮೃತದೇಹ ಪತ್ತೆಯಾಗಿರುವ ರೂಮಿನ ಬಾಗಿಲು ತೆರೆದು ತನಿಖೆ ಆರಂಭಿಸುತ್ತಿದ್ದಾರೆ.

ಪಂಚನಾಮೆ ಬಳಿಕ ಮೃತದೇಹವನ್ನು ಮಣಿಪಾಲ ಕೆಎಂಸಿಯ ಶವಾಗಾರಕ್ಕೆ ವರ್ಗಾಯಿಸಿ ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next